ರಾಮಚಂದ್ರ ಗೌಡ 
ರಾಜ್ಯ

ಚುನಾವಣಾ ರಾಜಕೀಯಕ್ಕೆ ರಾಮಚಂದ್ರ ಗೌಡ ವಿದಾಯ

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಚುನಾವಣಾ ...

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲಿದ್ದಾರೆ. ಆದರೆ ಪಕ್ಷದ ಚಟುವಟಿಕೆಗಳಲ್ಲಿ ಅವರು ಮುಂದೆ ಕೂಡ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ 5ನೇ ಬಾರಿಗೆ ಸೇವೆಯಲ್ಲಿರುವ ಅವರು ಈಗಾಗಲೇ ತಮ್ಮ ನಿರ್ಧಾರವನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ತಿಳಿಸಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿರುವ ರಾಮಚಂದ್ರ ಗೌಡ ಮುಂದಿನ ವರ್ಷ ಜೂನ್ ನಲ್ಲಿ ಅವರ ಅಧಿಕಾರಾವಧಿ ಮುಗಿಯಲಿದೆ. ಆ ಬಳಿಕ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಮೋದಿ-ಶಾ ಆಡಳಿತದಲ್ಲಿ ಹೊಸಬರಿಗೆ ಆದ್ಯತೆ ನೀಡಿ ಹಳೆಯ ನಾಯಕರನ್ನು ಮೂಲೆಗುಂಪು ಮಾಡುತ್ತಿರುವ ಈ ಸಂದರ್ಭದಲ್ಲಿ ರಾಮಚಂದ್ರ ಗೌಡ ಅವರು ಗೌರವಯುತವಾಗಿ ತಾವಾಗಿಯೇ ಚುನಾವಣಾ ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ.
ಸತತ 5 ಬಾರಿ ನಾನು ವಿಧಾನ ಪರಿಷತ್ ಸದಸ್ಯನಾಗಿದ್ದೇನೆ. ಹೀಗಾಗಿ ಹೊಸಬರಿಗೆ ಅವಕಾಶ ಮಾಡಿಕೊಡಲು ಈ ನಿರ್ಧಾರ ಕೈಗೊಂಡಿದ್ದೇನೆ, ಮುಂದಿನ ಚುನಾವಣೆಯಲ್ಲಿ ನನ್ನ ಪದವೀಧರ ಕ್ಷೇತ್ರಕ್ಕೆ ಯುವ ಸಕ್ರಿಯ ನಾಯಕನನ್ನು ನಾಮಾಂಕಿತ ಮಾಡಬೇಕೆಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ ಎಂದು ರಾಮಚಂದ್ರ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ