ಜಂಬೂ ಸವಾರಿಗೆ ಚಾಲನೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ 
ರಾಜ್ಯ

ಮುಂದಿನ ವರ್ಷವೂ ನಾನೇ 'ನಂದಿ ಧ್ವಜ'ಕ್ಕೆ ಪೂಜೆ ಸಲ್ಲಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಮುಂದಿನ ವರ್ಷವೂ ನಾನೇ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ....

ಮೈಸೂರು: ಮುಂದಿನ ವರ್ಷವೂ ನಾನೇ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾಡಿನ ಜನತೆಗೆ ದಸರಾದ ಶುಭಾಶಯವನ್ನು ಕೋರಿದರು. ಈ ಬಾರಿ ಎಲ್ಲೆಡೆ ಮಳೆಯಾಗಿದೆ. ಹೀಗಾಗಿ ಸಂಭ್ರಮದಿಂದ ದಸರಾ ಆಚರಿಸುತ್ತಿದ್ದೇವೆ. ಮಳೆಯಾಗಿರುವುದರಿಂದ ಕೆರೆಕಟ್ಟೆಗಳು ತುಂಬಿದ್ದು, ಜನರು ದಸರೆಯಲ್ಲಿ ಉತ್ಸಹದಿಂದ ಭಾಗವಹಿಸಿದ್ದಾರೆ ಎಂದರು.
ಮುಂದಿನ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೆ ನಡೆಯಲಿದ್ದು, ಮುಂದಿನ ದಸರೆಯನ್ನು ನಮ್ಮ ಸರ್ಕಾರವೇ ಮಾಡಲಿದೆ, ನಾನೇ ದಸರಾ ಪೂಜೆ ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ವರ್ಷ ರಾಜ್ಯದ ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ದಸರಾ ಜಂಬೂ ಸವಾರಿಗೆ ಚಾಲನೆ ನೀಡುವುದು ವಾಡಿಕೆ.
ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. ಅಂಬಾರಿ ಹೊತ್ತ ಅರ್ಜುನ ರಾಜ ಗಾಂಭೀರ್ಯ ನಡೆ. ಹಲವು ಕಲಾ ತಂಡಗಳಿಂದ ವಿಶೇಷ ವೇಷಾಭೂಷಣ, ನೃತ್ಯ ಪ್ರಕಾರ. ಸ್ಥಬ್ಧ ಚಿತ್ರಗಳು ಅನಾವರಣ ಈ ಬಾರಿ ಜಂಬೂ ಸವಾರಿ ಮೆರವಣಿಗೆಯ ಪ್ರಮುಖ ಆಕರ್ಷಣೆಗಳಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

ಆಶಾ ಭೋಸ್ಲೆ ಅಂತಿಮ ದರ್ಶನ ಪಡೆದು, ಕಣ್ಣೀರ ವಿದಾಯ ಹೇಳಿದ ಸಚಿನ್, ಮೊಹಮ್ಮದ್ ಸಿರಾಜ್! Video

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

SCROLL FOR NEXT