ರಾಜ್ಯಾದ್ಯಂತ ಅಕಾಲಿಕ ಮಳೆ, ಸಿಡಿಲು ಬಡಿದು ಇಬ್ಬರ ಸಾವು 
ರಾಜ್ಯ

ರಾಜ್ಯಾದ್ಯಂತ ಅಕಾಲಿಕ ಮಳೆ, ಸಿಡಿಲು ಬಡಿದು ಇಬ್ಬರ ಸಾವು

ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಸಿಡಿ;ಉ ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ.  ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಸಿಡಿ;ಉ ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯತಿಯ ರಾಮನೊಡ್ಡಂಪಲ್ಲಿ ಗ್ರಾಮದ ನರಸಿಂಹಪ್ಪ (60), ಸದಾಶಿವ (48) ಎನ್ನುವ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದಿದ್ದ ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಷ್ಟವಾಗಿದೆ.
ರಾಯಚೂರಿನ ಮಾನ್ವಿ ತಾಲೂಕಿನ ಕೋಳಿಕ್ಯಾಪ್ ರೈತರೊಬ್ಬರು ಸಿಡಿಲಿನಿಂದಾಗಿ ಗಾಯಗೊಂಡಿದ್ದಾರೆ. 
ಹಾಸನದಲ್ಲಿ ಜೆಡಿಎಸ್ ವಿಕಾಸ ಪರ್ವ ಯಾತ್ರೆಗೆ ಮಳೆ ಅಡ್ಡಿಯಾಗಿತ್ತು. ಮಳೆಯಲ್ಲಿಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರೋಡ್ ಶೋ ನಡೆಸಿದ್ದರು.
ಬೆಂಗಳೂರಿನಲ್ಲಿ ಮಳೆ
ಇಂದು ರಾಜಧಾನಿ ಬೆಂಗಳೂರಿನಲ್ಲಿ ಸಹ ವ್ಯಾಪಕ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್ ಪುರಂ, ಶಿವಾನಂದ ಸರ್ಕಲ್, ಜಯನಗರ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಅಕಾಲಿಕ ಮಳೆಯಾಗಿದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. 
ವಾಯುಭಾರ ಕುಸಿತದ ಕಾರಣ ಬೆಂಗಳೂರು ಹಾಗೂ ರಾಜ್ಯದ ವಿವಿಧೆಡೆ ಇನ್ನೂ ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ