ನವದೆಹಲಿ: ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರ್ಕಾರ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಇಲಾಖೆ ಅಲ್ಪಸಂಖ್ಯಾತ ವ್ಯವಹಾರಗಳ
ಇಲಾಖೆಗೆ ರವಾನೆ ಮಾಡಿದೆ.
ಪ್ರತ್ಯೇಕ ಧರ್ಮ ಹಾಗೂ ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ಪ್ರಸ್ತಾವನೆ ವಿಷಯ ತನ್ನ ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ಗೃಹ ಇಲಾಖೆ ಹೇಳಿದೆ. ಕೂಲಂಕುಶವಾಗಿ ವಿಷಯದ ಬಗ್ಗೆ ಪರಿಶೀಲನೆ ಮಾಡಲು ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಆಯುಕ್ತರಿಗೆ ಕಳಿಸಲಾಗಿತ್ತು, ನಂತರ ಅದನ್ನು ಅಲ್ಪಸಂಖ್ಯಾತ ಇಲಾಖೆಗೆ ಕಳಿಸಲಾಗಿದೆ.
ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರತ್ಯೇಕ ಧರ್ಮ, ಅಲ್ಪಸಂಖ್ಯಾತ ಸ್ಥಾನಮಾನದ ಕುರಿತ ಅಧಿಕೃತ ನಿರ್ಧಾರವನ್ನು ಮೇ.12 ರ ನಂತರ ನಿರೀಕ್ಷಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.