ಸಂಗ್ರಹ ಚಿತ್ರ 
ರಾಜ್ಯ

ಅಪ್ರಾಪ್ತ ಅತ್ಯಾಚಾರ ಸಂತ್ರಸ್ಥೆಯ 22 ವಾರಗಳ ಭ್ರೂಣ ತೆಗೆಯಲು ಕರ್ನಾಟಕ ಹೈಕೋರ್ಟ್‌ ಅನುಮತಿ

ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತೆಯೊಬ್ಬಳ ಹೊಟ್ಟೆಲ್ಲಿರುವ 22 ವಾರಗಳ ಭ್ರೂಣ ತೆಗೆಯಲು ಕರ್ನಾಟಕ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತೆಯೊಬ್ಬಳ ಹೊಟ್ಟೆಲ್ಲಿರುವ 22 ವಾರಗಳ ಭ್ರೂಣ ತೆಗೆಯಲು ಕರ್ನಾಟಕ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
ಮೂಲತಃ ದಾವಣಗೆರೆ ಪಟ್ಟಣದ ಅಪ್ರಾಪ್ತೆಯ ಹೊಟ್ಟೆಯಲ್ಲಿರುವ 22 ವಾರಗಳ ಭ್ರೂಣವನ್ನು ಗರ್ಭಪಾತ ಮಾಡಲು ಕರ್ನಾಟಕ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ. ಆಪ್ರಾಪ್ತೆಯ ಪೋಷಕರು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ರಾಘವೇಂದ್ರ ಚೌವ್ಹಾಣ್‌ ಅವರ ಏಕ ಸದಸ್ಯ ಪೀಠ, ಆಪ್ರಾಪ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದೆ. ಇದಕ್ಕೂ ಮೊದಲು ಪ್ರಕರಣ ಸಂಬಂಧ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಸಲ್ಲಿಕೆ ಮಾಡಿದ್ದ ವರದಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ.
'ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಆ ಅಪ್ರಾಪ್ತೆಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಆಕೆಯ ಗರ್ಭದಲ್ಲಿರುವ ಭ್ರೂಣವನ್ನು ತೆಗೆದು ಹಾಕಬೇಕು. ಆಕೆ ಸಂಪೂರ್ಣವಾಗಿ ಚೇತರಿಕೆ ಕಂಡ ಬಳಿಕ ಊರಿಗೆ ಕಳುಹಿಸಬೇಕು,' ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ 'ಆಕೆಯ ಹೊಟ್ಟೆಯಿಂದ ತೆಗೆಯುವ ಭ್ರೂಣವನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕಿದ್ದು, ಹೀಗಾಗಿ ಆಸ್ಪತ್ರೆ ಸುರಕ್ಷಿತವಾಗಿ ಭ್ರೂಣವನ್ನು ಸಂರಕ್ಷಿಸಬೇಕು. ನಂತರ ದಾವಣಗೆರೆ ಮಹಿಳಾ ಪೊಲೀಸಧಿರು ಆ ಭ್ರೂಣ ಪಡೆದು ಹೈದರಾಬಾದ್‌ನಲ್ಲಿರುವ ಕೇಂದ್ರ ಪ್ರಯೋಗಾಲಯಕ್ಕೆ ಡಿಎನ್‌ಎ ಪರೀಕ್ಷೆಗೆ ಕಳುಹಿಸಬೇಕು. ಅದು ಎರಡು ತಿಂಗಳಲ್ಲಿ ತನಿಖಾಧಿಕಾರಿಗೆ ವರದಿಯನ್ನು ಕೊಡಬೇಕು. ಈ ಕೆಲಸಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ ಎಂದೂ ನ್ಯಾಯಾಧೀಶರು ಆದೇಶಿಸಿದ್ದಾರೆ.
ಅತ್ಯಾಚಾರದಂತಹ ಪ್ರಕರಣಗಳಲ್ಲಿ ಸಂತ್ರಸ್ತೆ ಗರ್ಭಿಣಿಯಾಗಿ 26 ವಾರ ಕಳೆದಿದ್ದರೂ ಅಂತಹ ಪ್ರಕರಣಗಳಲ್ಲಿ ಭ್ರೂಣ ತೆಗೆಯಲು ಸುಪ್ರೀಂಕೋರ್ಟ್‌ ಅವಕಾಶ ನೀಡಿದೆ. ಆದರೆ ಈ ಪ್ರಕರಣದಲ್ಲಿ ಆಕೆ ಗರ್ಭಧರಿಸಿ 22 ವಾರಗಳಾಗಿವೆ. ಜೊತೆಗೆ ಬೆಂಗಳೂರು ವೈದ್ಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಸಲ್ಲಿಸಿರುವ ವರದಿ ಕೂಡ ಭ್ರೂಣವನ್ನು ತೆಗೆಯಲು ಯಾವುದೇ ಅಡ್ಡಿ ಇಲ್ಲ ಎಂದು ಹೇಳಿದೆ. ಹಾಗಾಗಿ ಈ ಆದೇಶ ನೀಡುತ್ತಿರುವುದಾಗಿ ನ್ಯಾಯಾಧೀಶರಾದ  ರಾಘವೇಂದ್ರ ಚೌವ್ಹಾಣ್‌ ಅವರು ಹೇಳಿದ್ದಾರೆ.
ಏನಿದು ಪ್ರಕರಣ?
ದಾವಣಗೆರೆ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅದೇ ಊರಿನ ಮಂದು ಎಂಬ ಪರಿಚಿತ ಯುವಕ ಆಕೆಯನ್ನು ನಂಬಿಸಿ ಹೊರಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಅಪ್ರಾಪ್ತೆ ಗರ್ಭಿಣಿಯಾಗಿದ್ದು, ಅಪ್ರಾಪ್ತೆಯಾಗಿರುವುದರಿಂದ ಮತ್ತು ಮದುವೆಯಾಗದೇ ಗರ್ಭಿಣಿಯಾಗಿರುವುದರಿಂದ ಸಮಾಜದಲ್ಲಿ ಹಾಗೂ ವೈಯಕ್ತಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಭ್ರೂಣವನ್ನು ತೆಗೆಸಲು ಅನುಮತಿ ನೀಡಬೇಕು ಆಪ್ರಾಪ್ತೆ ಎಂದು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಆ ಅಪ್ರಾಪ್ತೆ ಹಾಗೂ ಪೋಷಕರನ್ನು ತಮ್ಮ ಕೊಠಡಿಗೆ ಕರೆಸಿ, ವಿಚಾರಣೆ ನಡೆಸಿ, ಬಿಎಂಸಿಯಿಂದ ವೈದ್ಯ ವರದಿಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಿದ ಬಳಿಕ ಈ ಆದೇಶ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT