ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟ: ತನ್ವೀರ್ ಸೇಠ್
ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು ಇದಾಗಲೇ ಮೌಲ್ಯಮಾಪನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.ಮೇ ಮೊದಲವಾರ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಸಚಿವ ಸೇಠ್ ಹೇಳಿದರು.
ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸೇಠ್ ಈ ಸಾಲಿನ ಪರೀಕ್ಷೆ ನಡೆದಿರುವ ರೀತಿ ತೃಪ್ತಿ ತಂದಿದೆ. ಮಕ್ಕಳನ್ನು ಪರೀಕ್ಷಾ ಭಯದಿಂದ ದೂರ ಮಾಡುವ ಸಲುವಾಗಿ ಸಾಕಷ್ಟು ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಾಲಿನಲ್ಲಿ ಒಟ್ಟು 33 ವಿಷಯಗಳಲ್ಲಿ ಪರೀಕ್ಷೆ ನಡೆದಿದೆ ಎಂದು ಹೇಳಿದ್ದಾರೆ.
ಮೇ 15 ರಂದು ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ಕಾರಣ ಚುನಾವಣೆಗೆ ಮುನ್ನವೇ ಫಲಿತಾಂಶ ಘೋಷಣೆಗೆ ಚಿಂತನೆ ನಡೆಸಲಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.