ಸಿಲಿಂಡರ್ ಸ್ಫೋಟ: 3 ವರ್ಷದ ಮಗು ಸಾವು, ಇಬ್ಬರ ಸ್ಥಿತಿ ಗಂಭೀರ
ನಗರದ ದಾಸರಹಳ್ಳಿಯಲ್ಲಿ ಎಲ್ ಪಿಜಿ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂರು ....
ಬೆಂಗಳೂರು: ನಗರದ ದಾಸರಹಳ್ಳಿಯಲ್ಲಿ ಎಲ್ ಪಿಜಿ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂರು ವರ್ಷದ ಮಗು ದೇವಿಕಾ ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾಳೆ. ಇನ್ನು ಆರು ಮಂದಿಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮೊನ್ನೆ ಗುರುವಾರ ಟಿ.ದಾಸರಹಳ್ಳಿಯಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಗಾಯಗೊಂಡಿದ್ದರು. ಘಟನೆ ನಡೆಯುವುದಕ್ಕೆ ಸ್ವಲ್ಪ ಹೊತ್ತಿಗೆ ಮುಂಚೆ ದೇವರಾಜ್ ಅವರ ಐವರು ಸಂಬಂಧಿಕರು ಬೇಸಿಗೆ ರಜೆಗೆಂದು ಬಂದಿದ್ದರು.
ದೇವರಾಜ್ ಮತ್ತು ಲಕ್ಷ್ಮಿ ಪುತ್ರಿ ದೇವಿಕಾ ಆಗಿದ್ದು ಅಂಗನವಾಡಿಗೆ ಆಕೆಯನ್ನು ಸೇರಿಸಿದ್ದರು. ದೇವಿಕಾಳ ತಾಯಿ ಲಕ್ಷ್ಮಿ, ಆಕೆಯ ಸಂಬಂಧಿ ಅಲವೇಲಮ್ಮ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರಾದ ಸೋಮಶೇಖರ್, ನಿರಂಜನ್ ಬಾಬು, ವೆಂಕಟೇಶ್, ಮಲ್ಲೇಶ್ವರಿ ಮತ್ತು ಹೊನ್ನೂರಪ್ಪ ಅವರ ಸ್ಥತಿ ಸುಧಾರಿಸುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.