ಸಂಗ್ರಹ ಚಿತ್ರ 
ರಾಜ್ಯ

ವಿಧಾನಸಭೆ ಚುನಾವಣೆ: ರೌಡಿಗಳ ಮೇಲೆ ಪೊಲೀಸರ ಹದ್ದಿನ ಕಣ್ಣು

ರಾಜ್ಯದಲ್ಲಿ ವಿಧಾನಸಬೆ ಚುನಾವಣೆ ಹತ್ತಿರ ಬರುತ್ತಿದ್ದು. ಈ ಹಿನ್ನಲೆಯಲ್ಲಿ ರೌಡಿಗಳ ಮೇಲೆ ನಗರದ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ವಿಧಾನಸಬೆ ಚುನಾವಣೆ ಹತ್ತಿರ ಬರುತ್ತಿದ್ದು. ಈ ಹಿನ್ನಲೆಯಲ್ಲಿ ರೌಡಿಗಳ ಮೇಲೆ ನಗರದ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. 
ಚುನಾವಣೆಗೆ ಇನ್ನು 1 ತಿಂಗಳಷ್ಟೇ ಬಾಕಿಯಿದ್ದು, ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಈಗಾಗಲೇ ಎಚ್ಚರಿಕೆ ವಹಿಸಿರುವ ಪೊಲೀಸರು ರೌಡಿಗಳ ಚಟುವಟಿಕೆಗಳು ಹಾಗೂ ಸಮಾಜ ವಿರೋಧಿ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಲು ಕಾರ್ಯನಿರ್ವಹಿಸುತ್ತಿದ್ದಾರೆ. 
ರಾಜ್ಯದಲ್ಲಿರುವ 2,500 ರೌಡಿಗಳು ಹಾಗೂ ಸಮಸ್ಯೆಗಳನ್ನು ಸೃಷ್ಟಿಸುವ ಇನ್ನಿತರೆ ರೌಡಿಗಳು ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆಗಳನ್ನು ಸೃಷ್ಟಿಸುವುದಿಲ್ಲ ಎಂದು ಪೊಲೀಸರು ಭರವಸೆ ನೀಡಿದ್ದಾರೆ. 
ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಓಲೈಸಲು ರಾಜಕೀಯ ವ್ಯಕ್ತಿಗಳು ಮೊದಲು ರೌಡಿಗಳನ್ನು ಬಳಸಿಕೊಳ್ಳಲುಮುಂದಾಗುತ್ತಾರೆ. ರೌಡಿಗಳ ಮೂಲಕ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಾರೆ. ಇದರಿಂದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತವೆ. ಹೀಗಾಗಿ ರೌಡಿಗಳ ಚಲನವಲನ ಹಾಗೂ ಅವರ ಚಟುವಟಿಕೆಗಳ ಮೇಲೆ ಕಣ್ಣಿಡುವುದು ಮುಖ್ಯವಾಗಿರುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಚುನಾವಣೆ ಅಂತ್ಯಗೊಳ್ಳುವವರೆಗೂ ರೌಡಿ ಶೀಟರ್ ಗಳು, ಕಳ್ಳರು ಹಾಗೂ ಈಗಷ್ಟೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಆರೋಪಿಗಳ ಮೇಲೆ ಕಣ್ಗಾವಲಿರಿಸುವಂತೆ ಈಗಾಗಲೇ ಎಲ್ಲಾ ಠಾಣೆಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ರೌಡಿ ಶೀಟರ್ ಒಬ್ಬನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿತ್ತು. ಇದರಿಂದ ಇನ್ನಿತರೆ ರೌಡಿಗಳಿಗೆ ಕಠಿಣ ಸಂದೇಶ ರವಾನೆಯಾಗಿದೆ. ಹೀಗಾಗಿ ಚುನಾವಣೆ ವೇಳೆ ರೌಡಿಗಳು ಯಾವುದೇ ರೀತಿಯಲ್ಲಿಯೂ ಅಪರಾಧ ಕೃತ್ಯಗಳನ್ನೆಸಗುವುದಿಲ್ಲ. ರೌಡಿಗಳು ನಮ್ಮ ದಾಳಿ ಮಾಡಿದ ಸಂದರ್ಭದಲ್ಲಿ, ಆತ್ಮ ರಕ್ಷಣೆಗಾಗಿ ಆವರ ಮೇಲೆ ಗುಂಡು ಹಾರಿಸುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. 
ಚುನಾವಣೆ ಸಂದರ್ಭದಲ್ಲಿ 45 ಸೇನೆ ಹಾಗೂ ಅರೆ ಸೇನಾ ಪಡೆಗಳು ನಗರದಲ್ಲಿ ಭದ್ರತೆಯನ್ನು ಒದಗಿಸಲಿದೆ. ಈಗಾಗಲೇ 15 ಸೇನಾಪಡೆಗಳು ನಗರಕ್ಕೆ ಆಗಮಿಸಿದೆ. 7 ಪ್ರಮುಖ ಚೆಕ್ ಪೋಸ್ಟ್ ಗಳಲ್ಲಿ ಭದ್ರತಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ನಗರಕ್ಕೆ ಆಗಮಿಸುವ ಹಾಗೂ ಹೊರಗೆ ಹೋಗುವ ಎಲ್ಲಾ ವಾಹನಗಳನ್ನು ಪರಿಶೀಲನೆ ನಡೆಸುತ್ತಿದೆ. ಈ ವರೆಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ 8 ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸರ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP