ಪ್ರಧಾನಮಂತ್ರಿ ನರೇಂದ್ರ ಮೋದಿ 
ರಾಜ್ಯ

ಏ.29ರಿಂದ ರಾಜ್ಯದ ವಿವಿಧೆಡೆ ಪ್ರಧಾನಿ ಮೋದಿ ರ್ಯಾಲಿ

ರಾಜ್ಯ ವಿಧಾನಸಭಾ ಚುನಾವಣೆ ಅಖಾಡಕ್ಕಿಳಿಯುವ ಪಕ್ಷದ ಅಭ್ಯರ್ಥಿಗಳ ಪರ ಏ.29ರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಚಾರಾಂದೋಲನ ಆರಂಭಿಸಲಿದ್ದಾರೆಂದು ತಿಳಿದುಬಂದಿದೆ...

ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆ ಅಖಾಡಕ್ಕಿಳಿಯುವ ಪಕ್ಷದ ಅಭ್ಯರ್ಥಿಗಳ ಪರ ಏ.29ರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಚಾರಾಂದೋಲನ ಆರಂಭಿಸಲಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಅವರು, ಏಪ್ರಿಲ್ 29ರಿಂದ ಪ್ರಧಾನಿ ಮೋದಿಯವರ ಪ್ರಚಾರ ರಾಜ್ಯದಲ್ಲಿ ಆರಂಭವಾಗಲಿದೆ. ಯಾವ ದಿನ, ಎಲ್ಲಿ ಪ್ರಚಾರ ನಡೆಸಬೇಕು ಎಂಬ ಪಟ್ಟಿ ಸಿದ್ಧಗೊಂಡಿದ್ದು, ಅದರಂತೆ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆಂದು ಹೇಳಿದ್ದಾರೆ. 
ರಾಜ್ಯದ ವಿವಿಧೆಡೆ ಆಯೋಜಿಸುವ ಬಹಿರಂಗ ಸಭೆ, ರ್ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ. 
ಗುಜರಾತ್ ರಾಜ್ಯಲ್ಲಿ ಚುನಾವಣೆ ನಡೆದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು 34 ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಇದೀಗ ರಾಜ್ಯದ ಜನತೆಯನ್ನು ಸೆಳೆಯುವ ಸಲುವಾಗಿ ಮೋದಿಯವರು ಮೇ.10ರವರೆಗೂ ರಾಜ್ಯದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ರಾಜ್ಯದಲ್ಲಿ ಪ್ರಧಾನಿ ಮೋದಿಯವರು ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕೆಂದು ಪಕ್ಷದ ಹಲವಾರು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ಮನೆಮನೆಗೆ ತೆರಳಿ ಮತದಾರರನ್ನು ಓಲೈಸುತ್ತಿದ್ದು, ಚುನಾವಣೆ ಹತ್ತಿರ ಬರುವ ಸಂದರ್ಭದಲ್ಲಿ ಮೋದಿಯವರು ರ್ಯಾಲಿ ನಡೆಸಿದರೆ, ಸಾಕಾಗುತ್ತದೆಕ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆಂದು ಮುರಳೀಧರ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!