ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಹಿರೇಗೌಡ ಗ್ರಾಮದ ಬಳಿ ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನವರು ಎಂದು ತಿಳಿದುಬಂದಿದ್ದು ಚಾಲಕ ನಿಂಗೇಶ್, ದೀಪಾ ಹಾಗೂ ಶ್ರೇಯಾ ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಕೊಡ್ಲಿಪೇಟೆಗೆ ಹೋಗಿ ಚಿಕ್ಕಮಗಳೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯಾದ ರಭಸಕ್ಕೆ ಕಾರು ಬಹುತೇಕ ನಜ್ಜುಗುಜ್ಜಾಗಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅನುನೀಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.