ಕೆ.ಆರ್.ಸರ್ಕಲ್ ನಲ್ಲಿ ಜಾಲಾವೃತ್ತಗೊಂಡಿರುವ ರಸ್ತೆಯಲ್ಲಿ ಸಾಗುತ್ತಿರುವ ದ್ವಿಚಕ್ರ ವಾಹನ ಸವಾರ 
ರಾಜ್ಯ

ಬಿಸಿಲ ಬೇಗೆಗೆ ಕಂಗಾಲಾಗಿದ್ದ ನಗರದಲ್ಲಿ ತಂಪೆರೆದ ಮಳೆರಾಯ

ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನ ಬಹುಭಾಗಗಳಲ್ಲಿ ಶುಕ್ರವಾರ ಮಳೆ ತಂಪೆರೆಯಿತು...

ಬೆಂಗಳೂರು; ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನ ಬಹುಭಾಗಗಳಲ್ಲಿ ಶುಕ್ರವಾರ ಮಳೆ ತಂಪೆರೆಯಿತು. 
ಇಳಿ ಸಂಜೆಯಲ್ಲಿ ಮಳೆ ಆರಂಭವಾಗಿದ್ದರಿಂದ ಕೆಲಸ ಮುಗಿಸಿ ಮನಗೆ ಹೊರಟ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸವಂತಾಗಿತ್ತು. 
ಮಳೆಯಿಂದಾಗಿ ವಿವಿಧೆಗೆ ಮರ ಹಾಗೂ ಮರದ ಕೊಂಬೆಗಳು ಹಾಗೂ ವಿದ್ಯುತ್ ಕಂಬ ಧರೆಗುರುಳಿ, ವಾಹನ ಸಂಚಾರಕ್ಕೆ ಅಡಚಣೆಗಳುಂಟಾಗಿತ್ತು. 
ಬೆಂಗಳೂರು ದಕ್ಷಿಣ ಮತ್ತು ಪೂರ್ವ ವಲಯದ ಬಹುತೇಕ ಕಡೆಗಳಲ್ಲಿ ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿತ್ತು. ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರಂ, ಮೈಸೂರು ರಸ್ತೆ, ಎಂ.ಜಿ ರಸ್ತೆ, ಸೇರಿದಂತೆ ಅನೇಕ ರಸ್ತೆಗಳಲ್ಲಿ ನೀರು ತುಂಬಿ ಹರಿದಿದ್ದವು. 
ಎಂ.ಜಿರಸ್ತೆ, ಕಾಟನ್ ಪೇಟೆಯ ಗೂಡ್ ಶೆಡ್ ರಸ್ತೆ, ಬನ್ನೇರುಘಟ್ಟ ರಸ್ತೆ, ಶಾಂತಿ ನಗರ ಬಸ್ ನಿಲ್ದಾಣ ಬಳಿಯ ರಸ್ತೆಗಳಲ್ಲಿನ ತಗ್ಗುಪ್ರದೇಶದ ಭಾಗದಲ್ಲಿ ಮೊಳಕಾಲುದ್ದ ನೀರು ಸಂಗ್ರಹವಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿತ್ತು. 
ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ