ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಒಟ್ಟು 5.10 ಕೋಟಿ ಮತದಾರರು: ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌

ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಒಟ್ಟು 5.10 ಕೋಟಿ ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಒಟ್ಟು 5.10 ಕೋಟಿ ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ನಿನ್ನೆ ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಸಂಜೀವ್ ಕುಮಾರ್ ಅವರು ಈ ಮಾಹಿತಿ ನೀಡಿದ್ದಾರೆ. 'ಮಾರ್ಚ್‌ 14ರೊಳಗೆ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಲಾಗುವುದು. ಅದರಂತೆ 2018ರ ವಿಧಾನಸಭಾ ಚುನಾವಣೆಗೆ ಒಟ್ಟು ಮತದಾರರ ಸಂಖ್ಯೆ 5.10 ಕೋಟಿ ಆಗಲಿದೆ ಎಂದು ಹೇಳಿದ್ದಾರೆ.
ಫೆಬ್ರವರಿ 28ಕ್ಕೆ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ 4.96 ಕೋಟಿ ಮತದಾರರು ಇದ್ದರು. ಬಳಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮಾರ್ಚ್ 14ರವರೆಗೆ ಅವಕಾಶ ನೀಡಲಾಗಿತ್ತು. ಅದರಲ್ಲಿ 13.46 ಲಕ್ಷ ಅರ್ಜಿಗಳು ಸ್ವೀಕಾರಗೊಂಡಿದ್ದು, ಆ ಪೈಕಿ 66 ಸಾವಿರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 12.02 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 77 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಅದರಂತೆ ಈ ಬಾರಿ ಮತದಾರರ ಸಂಖ್ಯೆ 5.10 ಕೋಟಿ ಆಗಬಹುದು ಎಂದು ಸಂಜೀವ್ ಕುಮಾರ್ ಅವರು ತಿಳಿಸಿದರು.
ಉಳಿದಂತೆ ಫಾರಂ-7ರಡಿ 2.22 ಲಕ್ಷ ಅರ್ಜಿಗಳು ಬಂದಿದ್ದು, 8 ಸಾವಿರ ಅರ್ಜಿಗಳನ್ನು ತಿರಸ್ಕರಿಸಿ 2.08 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ