ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಗುವಿನೊಂದಿಗೆ ರೈಲಿನಿಂದ ಹಾರಿ ಮಹಿಳೆ ಆತ್ಮಹತ್ಯೆ

ಖಿನ್ನತೆಯಿಂದ ಬಳಲುತ್ತಿದ್ದ 38 ವರ್ಷದ ಮಹಿಳೆಯೊಬ್ಬರು ತನ್ನ 9 ತಿಂಗಳ ಮಗುವಿನೊಂದಿಗೆ ...

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ 38 ವರ್ಷದ ಮಹಿಳೆಯೊಬ್ಬರು ತನ್ನ 9 ತಿಂಗಳ ಮಗುವಿನೊಂದಿಗೆ ಚಲಿಸುತ್ತಿದ್ದ ರೈಲಿನ ಅಡಿಗೆ ಹಾರಿ ಮೃತಪಟ್ಟಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ. ಜೊತೆಗೆ ಡೆತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ.

ಈ ಘಟನೆ ಕಳೆದ ಸೋಮವಾರ ರಾತ್ರಿ ನಡೆದಿದ್ದು ಮೃತ ದುರ್ದೈವಿಗಳನ್ನು ಮಂಜುಳಾ ಮತ್ತು ಆಕೆಯ 9 ವರ್ಷದ ಪುತ್ರ ಗಗನ್ ಎಂದು ಗುರುತಿಸಲಾಗಿದೆ. ಈಕೆ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಿಷಿಯನ್ ದಿವಾಕರ್ ಕೆ ಎಂಬುವವರನ್ನು ಮದುವೆಯಾಗಿದ್ದು 12 ವರ್ಷದ ಪುತ್ರಿ ಗುಣಶ್ರೀ ದಂಪತಿಗಿದ್ದಾರೆ.

ಕಳೆದ ಸೋಮವಾರ ರಾತ್ರಿ ಈ ದುರ್ಘಟನೆ ನಡೆದಿದ್ದು ಮಂಗಳವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿ ಸಮೀಪ ಮೃತ ಶವಗಳನ್ನು ನೋಡಿ ಭದ್ರತಾ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಶವಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಪ್ರಾಥಮಿಕ ತನಿಖೆ ನಡೆಸಿದ ಪ್ರಕಾರ, ತನ್ನ ಕುಟುಂಬದವರಿಗೆ ಹೇಳದೆ ಕೆಲ ತಿಂಗಳ ಹಿಂದೆ ಮಂಜುಳಾ ಮನೆ ಬಿಟ್ಟು ಬಂದಿದ್ದರು. ಕೆಲ ದಿನಗಳ ನಂತರ ನಗರದ ಕೆಂಗೇರಿಯಲ್ಲಿ ಶವವಾಗಿ ಸಿಕ್ಕಿದ್ದಳು. ತನ್ನ ಸಾವಿಗೆ ಯಾರೂ ಹೊಣೆಯಲ್ಲ ಎಂದು ಮತ್ತು ತನ್ನ ಮಗಳು ಗುಣಶ್ರೀಯನ್ನು ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರಿಗೆ ದತ್ತು ನೀಡುವಂತೆ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾನಸಿಕ ಖಿನ್ನತೆಯಿಂದ ಕೆಲ ವರ್ಷಗಳಿಂದ ಬಳಲುತ್ತಿದ್ದ ಮಂಜುಳಾ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಸೋಮವಾರ ಪುತ್ರ ಗಗನ್ ನನ್ನು ಕರೆದುಕೊಂಡು ಮನೆ ಬಿಟ್ಟಿದ್ದಳು. ಯಶವಂತಪುರದ ಅಪಾರ್ಟ್ ಮೆಂಟ್ ವೊಂದರಲ್ಲಿ ಕೆಲಸ ಮಾಡುತ್ತಿದ್ದೆ. ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಾ ನನ್ನ ಮಗಳೊಬ್ಬಳೇ ಮನೆಯಲ್ಲಿದ್ದಳು. ನನ್ನ ಸಂಬಂಧಿಕರ ಜೊತೆ ಪತ್ನಿಯನ್ನು ಹುಡುಕಾಡಿದೆ. ಮರುದಿನ ಬೆಳಗ್ಗೆ ಸಾವಿನ ವಿಷಯ ತಿಳಿಯಿತು ಎಂದು ಪತಿ ದಿವಾಕರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!