ಸಾಂದರ್ಭಿಕ ಚಿತ್ರ 
ರಾಜ್ಯ

ಆಟೋಪೈಲಟ್ ವೈಫಲ್ಯ ವಿರಳವೇನಲ್ಲ: ರಾಹುಲ್ ವಿಮಾನ ತಾಂತ್ರಿಕ ದೋಷ ಕುರಿತು ಡಿಜಿಸಿಎ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹುಬ್ಬಳ್ಳಿಗೆ ಬಂದಿಳಿದ್ದ ವಿಮಾನದಲ್ಲಿನ ತಾಂತ್ರಿಕ ದೋಷ ಘಟನೆಯ ತನಿಖೆಗಾಗಿ ಇಬ್ಬರು ಸದಸ್ಯರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಎರಡು ಮೂರು ವಾರಗಳೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಬೆಂಗಳೂರು:  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹುಬ್ಬಳ್ಳಿಗೆ ಬಂದಿಳಿದ್ದ ವಿಮಾನದಲ್ಲಿನ   ತಾಂತ್ರಿಕ ದೋಷ ಘಟನೆಯ ತನಿಖೆಗಾಗಿ ಇಬ್ಬರು ಸದಸ್ಯರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಎರಡು ಮೂರು ವಾರಗಳೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

 ಈ ಮಧ್ಯೆ ಆಟೋಪೈಲಟ್ ವೈಫಲ್ಯ ವಿರಳವೇನಲ್ಲ ಎಂದು  ರಾಹುಲ್ ವಿಮಾನ ತಾಂತ್ರಿಕ ದೋಷ ಕುರಿತ ಡಿಜಿಸಿಎ ವರದಿಯಲ್ಲಿ ತಿಳಿಸಲಾಗಿದೆ.

ವಿಮಾನವು ರೇಡಾರ್‌ನಿಂದ ಸಂಪರ್ಕ ಕಳೆದುಕೊಂಡಿತ್ತು ಎಂದು ಕಾಂಗ್ರೆಸ್ ಹೇಳಿದ್ದು, ರಾಹುಲ್ ಗಾಂಧಿ ಆಪ್ತ ಕೌಶಲ್ ವಿದ್ಯಾರ್ಥಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್ . ರಾಜು ಅವರಿಗೆ ದೂರು ಸಲ್ಲಿಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

 ರಾಹುಲ್ ಗಾಂಧಿ ತನ್ನ ಆಪ್ತರಾದ ಅವರೊಂದಿಗೆ ಅವರ ಆಪ್ತರಾದ ವಿದ್ಯಾರ್ಥಿ, ರಾಮ್ ಪ್ರೀತ್, ರಾಹುಲ್ ರವಿ ಮತ್ತು ಭದ್ರತಾ ಸಿಬ್ಬಂದಿಗಳೊಂದಿಗೆ  ಏ. 26 ರಂದು ನವದೆಹಲಿಯಿಂದ ಹುಬ್ಬಳ್ಳಿಗೆ ವಿಶೇಷ ವಿಮಾನದಲ್ಲಿ (ವಿಟಿ- ಎವಿಹೆಚ್ ) ಪ್ರಯಾಣಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನವದೆಹಲಿಯಿಂದ ಬೆಳಿಗ್ಗೆ 9-20ಕ್ಕೆ ಹಾರಾಟ ಆರಂಭಿಸಿದ ವಿಮಾನದಲ್ಲಿ ಅನಿರೀಕ್ಷಿತ ತಾಂತ್ರಿಕ ದೋಷ ಕಂಡುಬಂದಿದೆ. 10-45 ರ ಸುಮಾರಿನಲ್ಲಿ ವಿಮಾನ ಅಲುಗಾಡುತ್ತಾ ಹಠಾತ್ತನೇ  ಇಳಿಜಾರಿನಲ್ಲಿ ಎತ್ತರದಿಂದ ಅತೀವವಾಗಿ ಕುಸಿದಿದೆ.

 ಹೊರಗಡೆ ಸಾಮಾನ್ಯ ಬಿಸಿಲಿನ ವಾತವಾರಣವಿದ್ದು, ಗಾಳಿ ಏನೋ ಬೀಸುತ್ತಿರಲಿಲ್ಲ ಎಂಬುದನ್ನು ಪ್ರತ್ಯೇಕ್ಷದರ್ಶಿಗಳು ನೋಡಿದ್ದಾರೆ. ವಿಮಾನದ ಆಟೋಪಿಲೈಟ್ ಕೆಲಸ ಮಾಡುತ್ತಿರಲಿಲ್ಲ ಎಂಬುದು ಕಂಡುಬಂದಿದ್ದು, ಬೆಳಿಗ್ಗೆ 11-25ರ ವೇಳೆಗೆ ನಡುಕದ ಶಬ್ದದೊಂದಿಗೆ  ಹುಬ್ಬಳ್ಳಿಗೆ ಬಂದಿಳಿಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಮಾನವು ರೇಡಾರ್‌ನಿಂದ ಸಂಪರ್ಕ ಕಳೆದುಕೊಂಡಿತ್ತು ಎಂದು ದೂರುದಾರರು ದೂರು ಸಲ್ಲಿಸಿದ್ದಾರೆ. ಇದೊಂದು ಗಂಭೀರ ವಿಚಾರವಾಗಿದ್ದು, ಸೂಕ್ತ ತನಿಖೆ ನಡೆಸುವಂತೆ ಮನವಿ ಸಲ್ಲಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?