ಸಂಗ್ರಹ ಚಿತ್ರ 
ರಾಜ್ಯ

ವಿಧಾನಸಭೆ ಚುನಾವಣೆ: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ನಗದು, ಮದ್ಯ ವಶ ಪ್ರಮಾಣ!

ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆ ಹಲವು ಪ್ರಥಮಗಳು ಮತ್ತು ದಾಖಲೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಮದ್ಯ ಮತ್ತು ನಗದು ವಶದಲ್ಲೂ ದಾಖಲೆ ಬರೆದಿದೆ.

ಬೆಂಗಳೂರು: ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆ ಹಲವು ಪ್ರಥಮಗಳು ಮತ್ತು ದಾಖಲೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಮದ್ಯ ಮತ್ತು ನಗದು ವಶದಲ್ಲೂ ದಾಖಲೆ ಬರೆದಿದೆ.
ಹೌದು.. ಕರ್ನಾಟಕದಲ್ಲಿ ಈ ಹಿಂದೆ ನಡೆದ ಎಲ್ಲ ಚುನಾವಣೆಗಳಿಗಿಂತಲೂ ಈ ಬಾರಿ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಗಳು ಅತೀ ಹೆಚ್ಚಿನ ಪ್ರಮಾಣದಲ್ಲಿ ಹಣ ಮತ್ತು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣಾ ಆಯೋಗ ನೀಡಿರುವ  ಮಾಹಿತಿಯಂತೆ ಈ ವರೆಗೂ 42.778 ಕೋಟಿ ರೂ ನಗದು, 4,48,570.7 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ಚುನಾವಣೆಗೆ ಸಂಬಂಧಿಸಿದಂತೆ ಇದು ಸಾರ್ವಕಾಲಿಕ ದಾಖಲೆಯಾಗಿದ್ದು, ಈ ಹಿಂದೆಂದಿಗಿಂತಲೂ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಧಿಕಾರಿಗಳು ನಗದು, ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಪ್ರಸ್ತುತ ವಶಪಡೆಯಲಾದ ನಗದು, ಮದ್ಯ ವಶ ಪ್ರಮಾಣ 2013ರ ಕರ್ನಾಟಕ ವಿಧಾನಸಭಾ ಚುನಾವಣೆ ಮತ್ತು 2014ರ ಲೋಕಸಭಾ ಚುನಾವಣೆಯ ದಾಖಲೆಗಳನ್ನು ಹಿಂದಿಕ್ಕಿದೆ.
ಚುನಾವಣಾ ಆಯೋಗ ನೀಡಿರುವ ಮಾಹಿತಿಯಂತೆ  2013ರಲ್ಲಿ ಚುನಾವಣಾ ಆಯೋಗ 14.42 ಕೋಟಿ ನಗದು ಹಣ ಮತ್ತು 67,953 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿತ್ತು. ಆ ಬಳಿಕ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 44,924 ಲೀಟರ್ ಮದ್ಯ ಹಾಗೂ 28.8 ಕೋಟಿ ನಗದು ವಶಪಡಿಸಿಕೊಂಡಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!