ಸಂಗ್ರಹ ಚಿತ್ರ 
ರಾಜ್ಯ

ಈ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿರುವ ಚುನಾವಣಾ ಆಯೋಗ, ಮತಪತ್ರ ಗುರುತಿನ ಚೀಟಿ ಇಲ್ಲದೆ ಇದ್ದರೆ ಬೇರೆ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದು ಹೇಳಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿರುವ ಚುನಾವಣಾ ಆಯೋಗ, ಮತಪತ್ರ ಗುರುತಿನ ಚೀಟಿ ಇಲ್ಲದೆ ಇದ್ದರೆ ಬೇರೆ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದು ಹೇಳಿದೆ.
ಮತದಾರರು ಗುರುತಿನ ಚೀಟಿ ಇಲ್ಲದಿದ್ದರೂ ಮತಪತ್ರದಲ್ಲಿ ತಮ್ಮ ಹೆಸರು ಇದ್ದರೆ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಪಾಸ್​ಪೋರ್ಟ್, ಚಾಲನಾ ಪರವಾನಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಅರೆ ಸರ್ಕಾರ, ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ನೀಡಿರುವ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಕಚೇರಿಯ ಫೋಟೋ ಸಹಿತ ಪಾಸ್ ಪುಸ್ತಕ, ಪಾನ್ ಕಾರ್ಡ್, ಸ್ಮಾರ್ಟ್​ಕಾರ್ಡ್, ನರೇಗಾ ಜಾಬ್ ಕಾರ್ಡ್, ಕಾರ್ವಿುಕರ ಸಚಿವಾಲಯ ಯೋಜನೆಯಡಿ ನೀಡಿರುವ ಆರೋಗ್ಯ ಕಾರ್ಡ್, ಫೋಟೋವುಳ್ಳ ಪಿಂಚಣಿ ದಾಖಲೆ, ಚುನಾವಣಾ ಆಯೋಗದಿಂದ ನೀಡಿರುವ ದೃಢೀಕೃತ ಫೋಟೋ ವೋಚರ್ ಸ್ಲಿಪ್ಸ್, ಸಂಸದರು, ವಿಧಾನಸಭೆ, ಪರಿಷತ್ತಿನ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಅಧಾರ್ ಕಾರ್ಡ್​ಗಳನ್ನು ಬಳಸಬಹುದು.
ಎಪಿಕ್ ಕಾರ್ಡ್​ನಲ್ಲಿ ದೋಷವಿದ್ದರೆ ಇಲ್ಲವೇ ಕಾರ್ಡ್​ನಲ್ಲಿರುವ ಭಾವಚಿತ್ರ ಹೊಂದಾಣಿಕೆ ಆಗದಿದ್ದರೆ 12 ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಮತದಾರರ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿ ಬೇರೆ ವಿಧಾನಸಭಾ ಕ್ಷೇತ್ರದ ಎಪಿಕ್ ಕಾರ್ಡ್ ತೋರಿಸಿದರೂ ಅವರಿಗೆ ಮತದಾನಕ್ಕೆ ಅವಕಾಶವಿದೆ  ಎಂದು ಆಯೋಗ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ