ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: ನಾಳೆ ದ್ವಿತೀಯ ಪಿಯು ಪಲಿತಾಂಶ ಪ್ರಕಟ, 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ!

ಇದೇ ಸೋಮವಾರ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದ್ದು, ಪರೀಕ್ಷೆ ಬರೆದ ಸುಮಾರು 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಬೆಂಗಳೂರು: ಇದೇ ಸೋಮವಾರ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದ್ದು, ಪರೀಕ್ಷೆ ಬರೆದ ಸುಮಾರು 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ನಾಳೆ ಮಧ್ಯಾಹ್ನದ ಬಳಿಕ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಿದ್ದು, ಮಂಗಳವಾರ ಆಯಾ ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ. 
ಇನ್ನು ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಶಿಕ್ಷಣ ಸಚಿವರ ಬದಲಿಗೆ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಲಿದ್ದಾರೆ.  ನಾಳೆ ಸುದ್ದಿಗೋಷ್ಠಿ ಕರೆದು ಫಲಿತಾಂಶ ಪ್ರಕಟಗೊಳಿಸಲಿದ್ದಾರೆ ಎಂದು ಪಿಯು ಮಂಡಳಿ ನಿರ್ದೇಶಕಿ ಶಿಖಾ ಮಾಹಿತಿ ನೀಡಿದ್ದಾರೆ.
ಒಟ್ಟು ಆರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ  3,37,860 ಬಾಲಕಿಯರು ಮತ್ತು 3,52,292 ಬಾಲಕರು ಸೇರಿದ್ದಾರೆ.
ಎಸ್​​ಎಂಎಸ್​ ಮೂಲಕ ಫಲಿತಾಂಶ
ವಿದ್ಯಾರ್ಥಿಗಳು ಎಸ್​ಎಂಎಸ್​ ಮಾಡುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ. ತಮ್ಮ ಮೊಬೈಲ್​ನಿಂದ KAR12 ಎಂದು ಟೈಪ್​ ಮಾಡಿ ಒಂದು ಸ್ಪೇಸ್​ ಕೊಟ್ಟು ನಿಮ್ಮ ರೋಲ್​ ನಂಬರ್​ ನಮೂದಿಸಿ 56263ಗೆ ಸಂದೇಶ ಕಳುಹಿಸುವ ಮೂಲಕ ಫಲಿತಾಂಶ ಪಡೆಯಬಹುದು.
ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್ ಗಳ ವಿವರ:

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT