ಸಾಂದರ್ಭಿಕ ಚಿತ್ರ 
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಎನ್. ಚೆಲುವರಾಯಸ್ವಾಮಿ ಬೆಂಬಲಿಗರಿಗೆ ಐಟಿ ಶಾಕ್

ನಾಗಮಂಗಲದ ಕಾಂಗ್ರೆಸ್ ಅಭ್ಯರ್ಥಿ ಎನ್. ಚೆಲುವರಾಯ ಸ್ವಾಮಿ ಅವರ ಬೆಂಬಲಿಗರಾದ ಲಕ್ಷ್ಮೀನಾರಾಯಣ, ಧನಂಜಯ್ಯ, ಹಾಗೂ ಬೆಟ್ಟೆಗೌಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯ :  ನಾಗಮಂಗಲದ ಕಾಂಗ್ರೆಸ್ ಅಭ್ಯರ್ಥಿ ಎನ್. ಚೆಲುವರಾಯ ಸ್ವಾಮಿ ಅವರ ಬೆಂಬಲಿಗರಾದ ಲಕ್ಷ್ಮೀನಾರಾಯಣ, ಧನಂಜಯ್ಯ, ಹಾಗೂ ಬೆಟ್ಟೆಗೌಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆಲುವರಾಯಸ್ವಾಮಿ ಇತ್ತೀಚಿಗೆ ಜೆಡಿಎಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಸುಖದರೆ ಗ್ರಾಮದಲ್ಲಿರುವ ಹೋಟೆಲ್ ಉದ್ಯಮಿ ಲಕ್ಷ್ಮೀನಾರಾಯಣ ಅವರ ಮನೆ ಮೇಲೆ ಸುಮಾರು 30 ಅಧಿಕಾರಿಗಳ ತಂಡ ದಾಳಿ ನಡೆಸಿದೆ.  ತಪಾಸಣೆಯ ನಂತರ 30 ಸಾವಿರ ನಗದು ಹಾಗೂ ಬೆಳ್ಳಿಯ ಅಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಧನಂಜಯ್ಯ ಹಾಗೂ ಬೆಟ್ಟೆಗೌಡ ಅವರ ಮನೆ ಮೇಲೂ ನಡೆದ ದಾಳಿ ವೇಳೆ ಅನೇಕ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಮುಂಬೈಯಲ್ಲಿ ಸ್ವಂತ ಹೋಟೆಲ್ ಹೊಂದಿದ್ದಾರೆ.

 ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಲಕ್ಷ್ಮೀನಾರಾಯಣ ಆರೋಪಿಸಿದ್ದಾರೆ.  ಸ್ವಂತ ಹೋಟೆಲ್ ಹೊಂದಿದ್ದೇವೆ , ಯಾವುದೇ ರೀತಿಯ ಕಾನೂನು ಬಾಹಿರವಾಗಿ ಹಣ ಹಾಗೂ ಆಸ್ತಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ನಾಗಮಂಗಲದಲ್ಲಿ ಚೆಲುವರಾಯಸ್ವಾಮಿ ಅನೇಕ ಅಭಿವೃದ್ಧಿ ಕೆಲಸ ಮಾಡಿರುವುದರಿಂದ ಜೆಡಿಎಸ್ ತೊರೆದು ಕಾಂಗ್ರೆಸ್  ಅಭ್ಯರ್ಥಿಯನ್ನು ಬೆಂಬಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

 ಚುನಾವಣಾ ಪ್ರಚಾರಕ್ಕಾಗಿ ಹಲವು ಉದ್ಯಮಿಗಳು ನಾಗಮಂಗಲ ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ, ಜೆಡಿಎಸ್ ಕಾರ್ಯಕರ್ತರು ಅವರಿಗೆ ತೊಂದರೆ ನೀಡುತ್ತಿದ್ದಾರೆ. ಐಟಿ ದಾಳಿ ಮೂಲಕ ತಮ್ಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್