ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ; ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿ ಎಸ್ಐಟಿ ವಶಕ್ಕೆ

Manjula VN
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿಯೊಬ್ಬನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ. 
ತುಮಕೂರಿನ ಸುರೇಶ್ (37) ಬಂಧಿತನಾಗಿದ್ದು, ಪ್ರಕರಣದ 11ನೇ ಆರೋಪಿಯಾಗಿದ್ದಾನೆ. ಹತ್ಯೆ ಪ್ರಕರಣದಲ್ಲಿ ಸುರೇಶ್ ಪ್ರಮುಖ ಪಾತ್ರವಹಿಸಿತ್ತು, ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಹೀಗಾಗಿ ಆರೋಪಿಯನ್ನು ವಶಕ್ಕೆ ನೀಡುವಂತೆ ಎಸ್ಐಟಿ ಪರ ಸರ್ಕಾರಿ ವಿಶೇಷ ಅಭಿಯೋಜಕರು ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದರು. 
ಈ ಸಂಬಂಧ ನಿನ್ನೆ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪು ಪ್ರಕಟಿಸಿ, 8 ದಿನಗಳ ಕಾಲ ವಶಕ್ಕೆ ನೀಡಿ ಆದೇಶಿಸಿತ್ತು. 
ಇದಕ್ಕೆ ಸುರೇಶ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ತಮ್ಮ ಕಕ್ಷಿದಾರರಿಗೆ ತನಿಖಾಧಿಕಾರಿಗಳು ಬಹಳ ಹಿಂಸೆ ನೀಡಿದ್ದಾರೆ. ಹೀಗಾಗಿ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಬಾರದು. ಮತ್ತೆ ಈತನ ಮೇಲೆ ಹಲ್ಲೆ ನಡೆಸುತ್ತಾರೆಂದು ವಾದ ಮಂಡಿಸಿದ್ದರು. 
SCROLL FOR NEXT