ಸಂಗ್ರಹ ಚಿತ್ರ 
ರಾಜ್ಯ

ಏರೋ ಇಂಡಿಯಾ 2019 ಬೆಂಗಳೂರಿನ ಬದಲು ಲಖನೌಗೆ ಸ್ಥಳಾಂತರ?

ಏರೋ ಇಂಡಿಯಾ 2019 ಬೆಂಗಳೂರಿನ ಯೆಲಹಂಕ ವಾಯುನೆಲೆಯಲ್ಲಿ ನಡೆಯುವುದು ಅನುಮಾನವಾಗಿದೆ.

ಬೆಂಗಳೂರು: ಏರೋ ಇಂಡಿಯಾ 2019 ಬೆಂಗಳೂರಿನ ಯೆಲಹಂಕ ವಾಯುನೆಲೆಯಲ್ಲಿ ನಡೆಯುವುದು ಅನುಮಾನವಾಗಿದೆ. ಕಳೆದ 22 ವರ್ಷಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರವಾಗುವ ಸಂಭವವಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಮತ್ತು ರಕ್ಷಣಾ ಸಚಿವಾಲಯದ ಮೂಲಗಳ ಅನುಸಾರ  12ನೇ ಆವೃತ್ತಿಯ ಏರೋ ಇಂಡಿಯಾ ಶೋ ಅನ್ನು ಬೆಂಗಳೂರಿನ ಬದಲು ಲಖನೌನ ಬಕ್ಷಿ ಕಾ ತಾಲಾಬ್​ ಏರ್​ ಫೋರ್ಸ್​ ಸ್ಟೇಷನ್ ನಲ್ಲಿ ನಡೆಸಲಾಗುತ್ತದೆ.
 1996 ರಿಂದ ಏರೋ ಇಂಡಿಯಾ ಪ್ರದರ್ಶನವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಕಳೆದ 22 ವರ್ಷಗಳಲ್ಲಿ 11 ಬಾರಿ ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ಜಾಗತಿಕ ಶಕ್ತಿಗಳ ಗಮನ ಬೆಂಗಳೂರಿನತ್ತ ಹೊರಳುವಂತೆ ಮಾಡಿತ್ತು.
ಈ ಮುನ್ನ ಏರೋ ಇಂಡಿಯಾ ಪ್ರದರ್ಶನವು ಗೋವಾಗೆ ಸ್ಥಳಾಂತರವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಎಕ್ಸ್ ಪ್ರೆಸ್ ಗೆ ತಿಳಿದು ಬಂದ ಅಂಶವೆಂದರೆ ಗೋವಾಗೆ ಬದಲು ಲಖನೌ ನಲ್ಲಿ ಏರ್ ಶೋ ನಡೆಸಲು ಯೋಜಿಸಲಾಗಿದೆ.
ಎರಡು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಈ ವೈಮಾನಿಕ ಪ್ರದರ್ಶನದಲ್ಲಿ ದೇಶ, ವಿದೇಶಗಳ ವಿಮಾನಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತವೆ. ಒತ್ಟು ಐದು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ವಿಶ್ವದ ನಾನಾ ಭಾಗದ ಲೋಹದ ಹಕ್ಕಿಗಳು ಹಾರಾಟ ನಡೆಸಿ ವೀಕ್ಷಕರನ್ನು ಮೋಡಿ ಮಾಡುತ್ತದೆ.
ಬಾಹ್ಯಾಕಾಶ ನಿರ್ಬಂಧವು ಏರೋ ಇಂಡಿಯಾವನ್ನು ಬೆಂಗಳೂರಿನಿಂದ ಸ್ಥಳಾಂತರಿಸುವ  ಏಕೈಕ ಪ್ರಮುಖ ಕಾರಣವೆಂದು ಹೇಳಲಾಗಿದೆ.ಆದರೆ ಲಖನೌದಲ್ಲಿ ಶೋ ನಡೆಸಲು ನಿಗದಿಪಡಿಸಿರುವ ಪ್ರದೇಶದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಲ್ಲ ಎನ್ನಲಾಗಿದ್ದು ರಕ್ಷಣಾ ಸಚಿವಾಲಯ ಏರೋ ಇಂಡಿಯಾ ಪ್ರದರ್ಶನ ಎಲ್ಲಿ ನಡೆಯಬೇಕೆನ್ನುವ ಅಂತಿಮ ತೀರ್ಮಾನವನ್ನು ಇನ್ನಷ್ಟೇ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!