ರಾಜ್ಯ

ಕೊಡಗು ದಸರಾ ಮಹೋತ್ಸವಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆ- ಸಾರಾ ಮಹೇಶ್

Nagaraja AB

ಮಡಿಕೇರಿ: ಈ ಬಾರಿಯ ಕೊಡಗು ದಸರಾ ಮಹೋತ್ಸವಕ್ಕಾಗಿ    1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ  ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಭರವಸೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಡಿಕೇರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ,  ದಸರಾ ಮಹೋತ್ಸವಕ್ಕೆ  ಜಿಲ್ಲಾಧಿಕಾರಿ 1 ಕೋಟಿ ರೂಪಾಯಿಗಳ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾನೂನುಬಾಹಿರವಾಗಿ ತಲೆ ಎತ್ತಿರುವ ಹೋಮ್ ಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ  ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಆಗಸ್ಟ್ 2 ರೊಳಗೆ ಹೋಮ್ ಸ್ಟೇ ನೋಂದಣಿ ಮಾಡಿಕೊಳ್ಳುವಂತೆ ಆದೇಶ ನೀಡಲಾಗಿದೆ. ನೋಂದಣಿ ಮಾಡಿಕೊಳ್ಳದ ಹೋಮ್ ಸ್ಟೇಗಳನ್ನು ಜಿಲ್ಲಾಡಳಿತದಿಂದ ನಿರ್ಬಂಧಿಸಲಾಗುವುದು ಎಂದು ಅವರು  ತಿಳಿಸಿದರು.

ಜಿಲ್ಲೆಯಲ್ಲಿನ ಸಮಸ್ಯೆ ಕುರಿತಂತೆ ಶಾಸಕರು , ವಿಧಾನಪರಿಷತ್ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದು, ಮಳೆ ಸಂಬಂಧಿತ ಪರಿಹಾರ ಕಾರ್ಯಗಳಿಗಾಗಿ 50 ಕೋಟಿ ರೂಪಾಯಿಯನ್ನು ಈಗಾಗಲೇ ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದಾರೆ . ಪರಿಹಾರ ಕಾರ್ಯಗಳನ್ನು ಕ್ಷಿಪ್ರ ಗತಿಯಲ್ಲಿ ಕೈಗೊಂಡು ಪ್ರವಾಸೋದ್ಯಮ ಅಭಿವೃದ್ದಿಪಡಿಸಲಾಗುವುದು,ಜಿಲ್ಲೆಯಲ್ಲಿ ಸುಸ್ಥಿರ ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು  ಪ್ರೋತ್ಸಾಹಿಸುವುದಾಗಿ ಎಂದು ಸಾರಾ ಮಹೇಶ್ ತಿಳಿಸಿದರು.
SCROLL FOR NEXT