ಶ್ರೀ ಸಿಮೆಂಟ್ ಕಾರ್ಖಾನೆ 
ರಾಜ್ಯ

ಸೇಡಂ: ಸಿಮೆಂಟ್ ಕಾರ್ಖಾನೆಯಲ್ಲಿ ಕ್ರೇನ್ ಬಿದ್ದು ಆರು ಕಾರ್ಮಿಕರು ಸಾವು

ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂನಿಕನ ಕೋಡ್ಲಾ - ಬೆನಕನಹಳ್ಳಿ ಮಧ್ಯೆ ಇರುವ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ...

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂನಿಕನ ಕೋಡ್ಲಾ - ಬೆನಕನಹಳ್ಳಿ ಮಧ್ಯೆ ಇರುವ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಕ್ರೇನ್ ಕುಸಿದು ಬಿದ್ದು ಆರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತರು ಬಿಹಾರ ಮೂಲದ, ತಬಾರಕ್ ಅಲಿ(25), ಪಿಟಿ ಕಂಚನ್, ಸುಧಾಕರ್, ಜುಬೇರ್, ಬಿತಿನ್ ಹಾಗೂ ಅಜಯ್ ಎಂದು ಗುರುತಿಸಲಾಗಿದೆ. 
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಸೇಡಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಶಹಜಾದ್ ಎಂಬ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ.
ಎಂದಿನಂತೆ ಕಾರ್ಮಿಕರು ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದಾಗ ಬಿರುಗಾಳಿಯಿಂದಾಗಿ ಕ್ರೇನ್ ಕುಸಿದು ಬಿದ್ದಿದೆ. ಕ್ರೇನ್ ಅಡಿ ಸಿಲುಕಿದ್ದ ತಬಾರಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದು, ಆರು ಮಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಐವರು ಮೃತಪಟ್ಟಿದ್ದಾರೆ.
ಸೇಡಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

SCROLL FOR NEXT