ಬೆಂಗಳೂರು: ಬಂಡೀಪುರ ಹುಲಿ ಅಭಯಾರಣ್ಯದೊಳಗೆ ರಾತ್ರಿ ಸಂಚಾರ ನಿಷೇಧಿಸುವ ನಿರ್ಧಾರವನ್ನು ಮುಂದುವರಿಸುವ ಮತ್ತು ಎಲೆವೇಟೆಡ್ ಕಾರಿಡಾರ್ ನಿರ್ಮಾಣದ ಬಗ್ಗೆ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವುದರ ಮಧ್ಯೆ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲದೆ ಮೀಸಲು ಅಭಯಾರಣ್ಯದಲ್ಲಿ ಎಲೆವೇಟೆಡ್ ಕಾರಿಡಾರ್ ಗಳ ನಿರ್ಮಾ ಸಾಧ್ಯತೆಯಿಲ್ಲ ಎಂದು ಕೂಡ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಮುಂದಿರುವ ವಿಚಾರಣೆ ಬಗ್ಗೆ ಮಾಧ್ಯಮ ಬಗ್ಗೆ ಏಕೆ ಇಷ್ಟೊಂದು ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ಗೊತ್ತಾಗುತ್ತಿಲ್ಲ. ರಾತ್ರಿ ವೇಳೆ ಸಂಚಾರ ನಿಷೇಧ ಎತ್ತಿಹಿಡಿಯುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ವನ್ಯ ಜೀವಿಗಳ ಸಂರಕ್ಷಣೆಯ ದೃಷ್ಟಿಯಿಂದ ಕಾವೇರಿ ಮತ್ತು ಮಲೆಮಹದೇಶ್ವರ ವನ್ಯಧಾಮಗಳಲ್ಲಿ ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಬಂಡೀಪುರ ಮಾದರಿಯಲ್ಲೇ ವಾಹನ ಸಂಚಾರ ಸ್ಥಗಿತಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ರಾತ್ರಿವೇಳೆ ವಾಹನ ಸಂಚಾರದಿಂದ ವನ್ಯಪ್ರಾಣಿಗಳು ವಾಹಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವ ಪ್ರಕರಣಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಾಹನ ಸಂಚಾರ ನಿರ್ಬಂಧಿಸಲು ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.
ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಕುರಿತು ಕೇರಳ ಹಾಗು ಕರ್ನಾಟಕ ರಾಜ್ಯಗಳ ನಡುವೆ ಉಂಟಾಗಿರುವ ಜಟಾಪಟಿಯ ಬೆನ್ನಲ್ಲೇ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿರುವುದು ಮಹತ್ವ ಪಡೆದುಕೊಂಡಿದೆ.