ಹಾರಂಗಿ ನಾಲೆಗೆ ಬಿದ್ದ ಕಾರು: ಒಂದೇ ಕುಟುಂಬದ ನಾಲ್ವರು ಜಲಸಮಾಧಿ
ಮಾರುತಿ ಕಾರೊಂದು ಹಾರಂಗಿ ಕಾಲುವೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು...
ಮೈಸೂರು: ಮಾರುತಿ ಕಾರೊಂದು ಹಾರಂಗಿ ಕಾಲುವೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿಯೇ ಈ ಅಪಘಾತ ಸಂಭವಿಸಿದ್ದು, ಮೃತರು ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದ ಪಳನಿಸ್ವಾಮಿ, ಆತನ ಪತ್ನಿ ಸಂಜು, ಪುತ್ರ ನಿಖಿತ್, ಪುತ್ರಿ ಪೂರ್ಣಿಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮೃತದೇಹಗಳನ್ನು ಹೊರತೆಗಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬೆಟ್ಟದಪುರ ಪೊಲೀಸರು ತಿಳಿಸಿದ್ದಾರೆ.
ಈ ನಾಲ್ವರು ಕಮರಹಳ್ಳಿ ಬಳಿ ಇರುವ ದೇವಾಲಯಕ್ಕೆ ಪೂಜೆಗಾಗಿ ತೆರಳುತ್ತಿದ್ದರು ಎನ್ನಲಾಗಿದ್ದು, ದುರ್ಘಟನೆಗೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ.