ಮೃತ ಅಂಜನಪ್ಪ (37) ಹಾಗೂ ವೆಂಕಟೇಶ್(18) 
ರಾಜ್ಯ

ಶಿವಮೊಗ್ಗ: ಮ್ಯಾನ್​ ಹೋಲ್'ಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ...

ಶಿವಮೊಗ್ಗ: ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಸೋಮವಾರ ಶಿವಮೊಗ್ಗದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ನಗರದ ನ್ಯೂಮಂಡ್ಲಿಯ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ಮೃತರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದ ಅಂಜನಪ್ಪ (37) ಹಾಗೂ ವೆಂಕಟೇಶ್(18) ಎಂದು ಗುರುತಿಸಲಾಗಿದೆ.
15 ಅಡಿ ಆಳವಿದ್ದ ಮ್ಯಾನ್ ಹೋಲ್ ನಲ್ಲಿ ನೀರು ತುಂಬಿಕೊಂಡಿತ್ತು. ಮ್ಯಾನ್ ಹೋಲ್ ಕ್ಲೀನ್ ಮಾಡಲು ಇಳಿದ ಈ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ..
ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಗಳನ್ನು ಮೇಲೆತ್ತಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮ್ಯಾನ್ ಹೋಲ್ ಕಾಮಗಾರಿಯನ್ನು ಪ್ರಸಾದ್ ಎನ್ನುವವರು ಗುತ್ತಿಗೆ ಪಡೆದಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ