ಕೃಷಿ ಸಚಿವ ಶಿವಶಂಕರ ರೆಡ್ಡಿ 
ರಾಜ್ಯ

ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಸಿರಿಧಾನ್ಯಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ

ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ಕಾರಣ ರೈತರಿಗೆ ಅನುಕೂಲವಾಗಲಿ ಎಂದು ಹಾಪ್ ಕಾಮ್ಸ್ ಗಳಲ್ಲಿ ಧಾನ್ಯಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಯೋಜಿಸಿದೆ.

ಬೆಂಗಳೂರು: ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ಕಾರಣ ರೈತರಿಗೆ ಅನುಕೂಲವಾಗಲಿ ಎಂದು ಹಾಪ್ ಕಾಮ್ಸ್ ಗಳಲ್ಲಿ ಧಾನ್ಯಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಯೋಜಿಸಿದೆ.
ಸಿರಿಧಾನ್ಯಗಳ ಆರೋಗ್ಯಕರ ಗುನ ವೈಶಿಷ್ಟ್ಯದಿಂದಾಗಿ ವ್ಯಾಪಕ ಜನಪ್ರಿಯತೆ ಗಳಿಸುತ್ತಿದೆ. ಬೇಡಿಕೆ ಹೆಚ್ಚಾದಂತೆ ಬೆಲೆ ಸಹ ಏರಿಕೆಯಾಗುತ್ತಿದೆ. ಆದರೆ ಮಧ್ಯವರ್ತಿಗಳ ಹಾವಳಿಯಿಂದ ಧಾನ್ಯಗಳನ್ನು ಬೆಳೆದ ರೈತರಿಗೆ ಸಲ್ಲಬೇಕಾದ ಲಾಭಾಂಶ ಸಲ್ಲಿಕೆಯಾಗುತ್ತಿಲ್ಲ."ರೈತರಿಗೆ ಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹಿಸುವುದರ ಮೂಲಕ ಉತ್ತಮ ಬೆಲೆ ಪಡೆಯಲು ನಾವು ಸಹಕರಿಸುತ್ತೇವೆ. ಹಾಪ್ ಕಾಮ್ಸ್ ಹಾಗು  ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮಳಿಗೆಗಳ ಮೂಲಕ ಸಿರಿಧಾನ್ಯಗಳ ಮಾರಾಟ ನಡೆಸುವ ಪ್ರಸ್ತಾಪ ಸರ್ಕಾರದ ಮುಂದಿದೆ.ಇಂತಹ ಕ್ರಮವು ಗ್ರಾಹಕರಿಗೆ ಧಾನ್ಯಗಳು ಸಮರ್ಪಕ ಬೆಲೆಗೆ ಸಿಗಲು ಸಹಕಾರಿಯಾಗಲಿದೆ.ರೈತರಿಗೆ ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಆದಾಯವನ್ನು ಪಡೆಯಲು ಸಹ ಇದು ಅನುಕೂಲಕರವಾಗಿದೆ"ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದ್ದಾರೆ.
ಸಾವಯವ ಬೇಸಾಯಕ್ಕೆ ಉತ್ತೇಜನ ನೀಡಲು ಮತ್ತು ಶೂನ್ಯ ಬಜೆಟ್ ನೈಸರ್ಗಿಕ ಕೃಷಿ ಪ್ರೋತ್ಸಾಹಿಸುವ ಮೂಲಕ ಕೃಷಿಗಳಲ್ಲಿನ ವೆಚ್ಚವನ್ನು ತಗ್ಗಿಸಲು ಸರ್ಕಾರ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. "ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಇದಾಗಲೇ ಶೂನ್ಯ ಬಜೆಟ್ ಕೃಷಿ ವ್ಯವಸ್ಥೆ ಜಾರಿಯಲ್ಲಿದ್ದು ಕರ್ನಾಟಕದಲ್ಲಿಯೂ ಇದರ ಅನುಷ್ಠಾನವಾಗುವುದಕ್ಕೆ ನಾವು ಕ್ರಮ ಜರುಗಿಸುತ್ತೇವೆ. ಇದಕ್ಕಾಗಿ ಶೀಘ್ರದಲ್ಲೇ ಅನಂತಪುರಕ್ಕೆ ಒಂದು ಅಧ್ಯಯನ ಯ್ತಂಡವನ್ನು ಕಳಿಸುವ ಯೋಜನೆ ಇದೆ ಎಂದು ಸಚಿವರು ಹೇಳಿದ್ದಾರೆ.
ಆಹಾರ ಧಾನ್ಯಗಳ ಉತ್ಪಾದನಾ ಗುರಿ
ರಾಜ್ಯದ 13 ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿದೆ.ಖಾರಿಫ್ ಋತುವಿನಲ್ಲಿ 74.69 ಲಕ್ಷ ಹೆಕ್ಟೇರ್ ಳ ಒಟ್ಟು ಕೃಷಿ ಭೂಮಿಯಲ್ಲಿ ಬಿತ್ತನೆಯಾಗಬೇಕಾಗಿದ್ದದ್ದು  49.47 ಲಕ್ಷ ಹೆಕ್ಟೇರ್ ಗಳಲ್ಲಷ್ಟೇ ಬಿತ್ತನೆ ಆಗಿದೆ.ಆಗಸ್ಟ್ ಅಂತ್ಯದ ವೇಳೆಗೆ ಮತ್ತೊಂದು 8 ಲಕ್ಷ ಹೆಕ್ಟೇರ್ ಗಳಲ್ಲಿ ಬಿತ್ತನೆ ಪೂರ್ಣಗೊಳ್ಳಲಿದೆ.ಈ ವರ್ಷ 110 ಲಕ್ಷ ಟನ್  ಆಹಾರ ಧಾನ್ಯ ಉತ್ಪಾದನೆ ಗುರಿ ಹಾಕಿಕೊಳ್ಳಲಾಗಿದೆ.ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT