ರಾಜ್ಯ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಿಕೆ ಶಿವಕುಮಾರ್ ನೇಮಕ ಸರಿಯಲ್ಲ: ಎಸ್. ಆರ್. ಹಿರೇಮಠ್

Nagaraja AB
ಬಳ್ಳಾರಿ: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ಸರಿಯಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಭ್ರಷ್ಟಾಚಾರದ ಪ್ರತಿಬಿಂಬದಂತಿದ್ದಾರೆ. ಮೈಸೂರು ಮಿನರಲ್ಸ್ ಲಿಮಿಟೆಡ್ ಕಂಪನಿಯಿಂದ 10. 8 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಕಬ್ಬಿಣದ ಅದಿರು ಲೂಟಿ ಮಾಡಿದ್ದಾರೆ. ಇಂತಹವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ  ಸರ್ಕಾರ ನೇಮಕ ಮಾಡುವ ಮೂಲಕ ಕಟುಕನ ಕೈಗೆ ಕುರಿ ನೀಡಿದಂತಾಗಿದೆ ಎಂದರು.
ಜನಾರ್ದನ ರೆಡ್ಡಿ ಅವರಂತೆ ಶೀಘ್ರದಲ್ಲಿಯೇ ಡಿ. ಕೆ. ಶಿವಕುಮಾರ್ ಕೂಡಾ  ಪಾಶ್ಚ್ಯತಾಪ  ಅನುಭವಿಸಲಿದ್ದಾರೆ ಎಂದರು.
SCROLL FOR NEXT