ಹೈಕೋರ್ಟ್ ಮತ್ತು ಬಿಬಿಎಂಪಿ ಪ್ರಧಾನ ಕಛೇರಿ 
ರಾಜ್ಯ

ಆಗಸ್ಟ್ 14ರೊಳಗೆ ಬೆಂಗಳೂರು ಅಕ್ರಮ ಹೋರ್ಡಿಂಗ್ ಮುಕ್ತವಾಗಲಿ: ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ

ಆಗಸ್ಟ್ 14 ರೊಳಗೆಬೆಂಗಳೂರು ಮಹಾನಗರದ ಅಂದ ಕೆಡಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಬೇಕು ಎಂದು ಬ್ರಹ್ಮತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ.....

ಬೆಂಗಳೂರು: ಆಗಸ್ಟ್ 14ರೊಳಗೆಬೆಂಗಳೂರು ಮಹಾನಗರದ ಅಂದ ಕೆಡಿಸುತ್ತಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸಬೇಕು ಎಂದು ಬ್ರಹ್ಮತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಕರ್ನಾಟಕ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.
ಶುಕ್ರವಾರ ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ಈ ನಿರ್ದೇಶನ ನೀಡಿದೆ.ಆಗಸ್ಟ್ 1ರಿಂದ ಅನಧಿಕೃತ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆಗೆದು ಹಾಕುವ ಕಾರ್ಯಾಚರಣೆ ಪ್ರಾರಂಭವಾಗಿದ್ದು ಇದುವರೆಗೆ ಸುಮಾರು 22,000 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು  ಬಿಬಿಎಂಪಿ ನ್ಯಾಯಾಲಯಕ್ಕೆ ತಿಳಿಸಿದೆ. ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ  ನಗರದಾದ್ಯಂತ 223 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ನಗರದ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.
ಕಳೆದ ಸಾಲಿನ್ ಅವಿಚಾರಣೆ ವೇಳೆ ಅಕ್ರಮ ಜಾಹೀರಾತನ್ನು ತೆರವುಗೊಳಿಸುವ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲು ನಗರದ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿತ್ತು. ಅಲ್ಲದೆ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸುವ ಕಾರ್ಮಿಕರಿಗೆ ಅಗತ್ಯವಾಗಿದ್ದರೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸಹ ನ್ಯಾಯಾಲಯ ಸೂಚಿಸಿತ್ತು.
ಆಗಸ್ಟ್ 1ರಂದು ಹೈಕೋರ್ಟ್ ನೀಡಿದ ಸೂಚನೆಯಂತೆ ಬಿಬಿಎಂಪಿ ಬೆಂಗಳೂರಿನಲ್ಲಿರುವ ಎಲ್ಲಾ ಅಕ್ರಮ ಜಾಹೀರಾತು ಫಲಕಗಳ ತೆರವು ಕಾರ್ಯಾಅರಣೆಗೆ ಕ್ರಮ ತೆಗೆದುಕೊಂಡಿದೆ.ಇದುವರೆಗೆ ಬಿಬಿಎಂಪಿ ಇಂತಹಾ 60 ಫ್ಲೆಕ್ಸ್ ತಯಾರಿಕಾ ಘಟಕಗಳನ್ನು ಮುಚ್ಚಿದೆ. ಆಗಸ್ಟ್ 6 ರಂದು ವಿಶೇಷ ಕೌನ್ಸಿಲ್ ಸಭೆಯಲ್ಲಿ, ಬಿಬಿಎಂಪಿ ಎಲ್ಲಾ ರೀತಿಯ ಜಾಹೀರಾತು ಫಲಕಗಳನ್ನು ಹಾಕುವುದಕ್ಕೆ ಒಂದು ವರ್ಷ ಕಾಲ ನಿಷೇಧ ಹೇರುವ ನಿರ್ಣಯವನ್ನು ಜಾರಿಗೆ ತಂದಿದೆ. ಅದೇ ವೇಳೆ ಹೊಸ ಜಾಹೀರಾತು ನೀತಿಯನ್ನು ರೂಪಿಸಲು ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!