ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ದಿನವಾದ ನಾಳೆ ಪ್ಲಾಸ್ಟಿಕ್ ಧ್ವಜಗಳನ್ನು ಬಳಸದಂತೆ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಇಂದು ಆದೇಶ ನೀಡಿದೆ.
ಪ್ಲಾಸ್ಟಿಕ್ ಧ್ವಜಗಳ ಬಗ್ಗೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಾಳೆ ಎಲ್ಲಾ ರಸ್ತೆಗಳನ್ನು ವಿಡಿಯೋಗ್ರಾಫ್ ಮಾಡುವಂತೆಯೂ ನ್ಯಾಯಾಲಯದ ಪೊಲೀಸರಿಗೆ ತಿಳಿಸಿದೆ. ರಸ್ತೆಯಲ್ಲಿ ಪ್ಲಾಸ್ಟಿಕ್ ತಂಡು ಕೂಡಾ ಬೀಳದಂತೆ ನೋಡಿಕೊಳ್ಳುವಂತೆ ಬಿಬಿಎಂಪಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನಗರದಲ್ಲಿನ ಅನಧಿಕೃತ ಬ್ಯಾನರ್ಸ್, ಬಂಟಿಂಗ್ಸ್, ಫ್ಲೆಕ್ಸ್ ತೆರವಿನ ಬಗ್ಗೆ ನ್ಯಾಯಾಲಯ ಮೇಲ್ವಿಚಾರಣೆ ಮಾಡುತ್ತಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಬಿಬಿಎಂಪಿ ನಗರದಲ್ಲಿನ ಎಲ್ಲಾ ಕಡೆಗಳಲ್ಲಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದೆ.