ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಪರಿವೀಕ್ಷಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಮೂರು ತಂಡ ರಚನೆ

ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ಪರಿವೀಕ್ಷಣೆಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೂರು ತಂಡಗಳನ್ನು ರಚಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ಪರಿವೀಕ್ಷಣೆಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೂರು ತಂಡಗಳನ್ನು ರಚಿಸಿದ್ದಾರೆ.

ಮಿಥು ಚೆಂಗಪ್ಪ ನೇತೃತ್ವದ ಮೊದಲ ತಂಡ ದಕ್ಷಿಣ, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಮಾಜಿ ಸಚಿವ ಬಿ. ಕೆ.  ಚಂದ್ರಶೇಖರ್ ನೇತೃತ್ವದಲ್ಲಿನ ತಂಡ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದೆ.  ವೆಂಕಟಮುನಿಯಪ್ಪ ನೇತೃತ್ವದಲ್ಲಿನ ತಂಡ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದೆ.

 ಈ ವೀಕ್ಷಕರನ್ನೊಳಗೊಂಡ ತಂಡ  ರಾಜ್ಯಾದ್ಯಂತ  ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ರಸ್ತೆ ಹಾನಿ, ಸಂವಹನ ವ್ಯವಸ್ಥೆ, ಮನೆ, ಶಾಲೆ, ಬೆಳೆ  ಹಾನಿ ಕುರಿತಂತೆ ಜನರಿಂದ ಮಾಹಿತಿ ಸಂಗ್ರಹಿಸಿ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕಾರ್ಯ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ  ಪರಿಣಾಮಕಾರಿ ಪರಿಹಾರ ಕಾರ್ಯಗಳ ಬಗ್ಗೆ ಈ ಈ ತಂಡ ಕೆಪಿಸಿಸಿಗೆ  ವರದಿ ಸಲ್ಲಿಸಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ