ಡಿ. ಕೆ. ಶಿವಕುಮಾರ್ 
ರಾಜ್ಯ

ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ - ಡಿಕೆ ಶಿವಕುಮಾರ್

ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು:ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ  ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ 36.55 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಬೇಡಿಕೆ ಹಾಕಲಾಗಿತ್ತು. ಆದರೆ,  ನ್ಯಾಯಾಧೀಕರಣ 13.42 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಆದ್ದರಿಂದ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಂಬಂಧ ಕಾನೂನು ತಜ್ಞರ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

 ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಆಗಸ್ಟ್ 14 ರಂದು ತೀರ್ಪು ನೀಡಿದ  ನ್ಯಾಯಾಧೀಕರಣ ಕರ್ನಾಟಕಕ್ಕೆ  13.42 ಟಿಎಂಸಿ ನೀರು ಹಂಚಿಕೆ ಮಾಡಿತ್ತು. ಇದರ ವಿರುದ್ಧ ಗೋವಾ ಸರ್ಕಾರ ಕೂಡಾ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.

ಕೆಆರ್ ಎಸ್ , ಕಬಿನಿ, ತುಂಗಭದ್ರಾ ಜಲಾಶಯಗಳ ನೀರಿನ ಒಳಹರಿವು ಹೆಚ್ಚಳದಿಂದ ಅಲ್ಪಪ್ರಮಾಣದ ಹಾನಿಯಾಗಿದ್ದು, ಕಾಲುವೆ ದುರಸ್ಥಿಗೊಳಿಸಿ ಕೆರೆಗಳನ್ನು ಭರ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌