ಸಿಎಂ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಆಹಾರ ಧಾನ್ಯಗಳನ್ನು ಅತಿ ಹೆಚ್ಚು ಕಳಿಸಬೇಡಿ ಔಷಧಿ, ನಗದು ರೂಪದಲ್ಲಿ ಸಂತ್ರಸ್ತರಿಗೆ ಸಹಕಾರ ನೀಡಿ: ಹೆಚ್ ಡಿಕೆ ಕರೆ

ಜಲಪ್ರವಾಹಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಆಹಾರ ಧಾನ್ಯಗಳನ್ನು ಅತಿ ಹೆಚ್ಚು ಕಳಿಸುವ ಬದಲು ಔಷಧಿ, ನಗದು ರೂಪದಲ್ಲಿ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಕೊಡಗು: ಜಲಪ್ರವಾಹಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಆಹಾರ ಧಾನ್ಯಗಳನ್ನು ಅತಿ ಹೆಚ್ಚು ಕಳಿಸುವ ಬದಲು ಔಷಧಿ, ನಗದು ರೂಪದಲ್ಲಿ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ. 
ಖಾಸಗಿ ಸುದ್ದಿ ವಾಹಿನಿಯಲ್ಲಿ ಕೊಡಗು ಪರಿಸ್ಥಿತಿಯ ಬಗ್ಗೆ ಮಾತನಾಡಿರುವ ವೇಳೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಕೊಡಗು ಪ್ರದೇಶದ ಸಂತ್ರಸ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಔಷಧಿಗಳು, ನಗದು ರೂಪದಲ್ಲಿ ಸಹಕಾರ ನೀಡುವಂತೆ ಕರೆ ನೀಡಿದ್ದು, ವೈದ್ಯಕೀಯ ಸೌಲಭ್ಯ ತುರ್ತಾಗಿ ಅಗತ್ಯವಿರುವುದರಿಂದ ಖಾಸಗಿ ವೈದ್ಯರು 3-4 ದಿನಗಳು ಕೊಡಗಿಗೆ ಬಂದು ಸೇವೆ ಸಲ್ಲಿಸುವುದು ಹೆಚ್ಚಿನ ಪ್ರಮಾಣದಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. 
ನಿರಂತರ ಮಳೆ ಸುರಿಯುತ್ತಿರುವುದರಿಂದ ಕೊಡಗಿನಲ್ಲಿ ಹಲವರು ಮನೆಗಳನ್ನು ಕಳೆದುಕೊಂಡಿದ್ದು, ಭೂ ಕುಸಿತದಿಂದ ಅವರಿದ್ದ ಸ್ಥಳವನ್ನು ಗುರುತಿಸುವುದಕ್ಕೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಮನೆ ಕಳೆದುಕೊಂಡು ಸ್ಥಳವನ್ನು ಗುರುತಿಸಲು ಸಾಧ್ಯವಗಾದವರಿಗೆ ಹಕ್ಕು ಪತ್ರ ಕಳೆದುಕೊಳ್ಳುವ ಭಯ ಕಾಡುತ್ತಿದೆ. ಆದರೆ ನಿರಾಶ್ರಿತರಿಗೆ ಆ ಕುರಿತು ಭಯ ಬೇಡ ಸರ್ಕಾರವೇ ಕ್ರಮ ಕೈಗೊಂಡು ಮನೆಗಳನ್ನು ಕಟ್ಟಿಕೊಡಲಿದೆ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. 
ರಾಜ್ಯದ ಜನತೆ ಕೊಡಗಿನ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ಕಳಿಸಿಕೊಡುತ್ತಿದ್ದಾರೆ.  ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಕಳಿಸಿದರೆ ಹಾಳಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ  ಆಹಾರ ಸಾಮಗ್ರಿಗಳನ್ನು ಹೆಚ್ಚು ಕಳಿಸುವ ಬದಲು ಔಷಧಿ, ನಗದು ರೂಪದಲ್ಲಿ ಸಂತ್ರಸ್ತರಿಗೆ ಸಹಕಾರ ನೀಡಿದರೆ ಪರಿಣಾಮಕಾರಿಯಾಗಿರುತ್ತದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮುಂದಾಗುವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ಆರ್ಥಿಕ ರೂಪದಲ್ಲಿ ಸಹಾಯ ಮಾಡಬಹುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!