ಕೊಡಗು: ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ವದಂತಿ ಸುಳ್ಳು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಕೂಡ ಟ್ವೀಟ್ ಮಾಡಿದ್ದಾರೆ. ಜನರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಈಡಾಗಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.