ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಒಂದು ತಿಂಗಳ ವೇತನವನ್ನು ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಭಾನುವಾರ ಹೇಳಿದ್ದಾರೆ.
ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು 'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷ ತೆಯಲ್ಲಿ ನಡೆದ ಸಭೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ನೀಡಲು ಒಂದು ತಿಂಗಳ ವೇತನ ನೀಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ ಅವರ ನೇತೃತ್ವದಲ್ಲಿ ತುರ್ತು ಪರಿಹಾರ ಸಮಿತಿಯನ್ನು ರಾಹುಲ್ ಗಾಂಧಿ ಅವರು ರಚನೆ ಮಾಡಿದ್ದಾರೆ. ಈ ಸಮಿತಿಯು ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅವರು ಹೇಳಿದರು.
ಕೊಡಗು ಮತ್ತು ಕೇರಳದ ಪ್ರವಾಹ ಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿ ಅವರಿಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ ಎಂದರು ಅವರು ತಿಳಿಸಿದರು. ಅಲ್ಲದೇ ರಫೇಲ್ ಡೀಲ್ ಭ್ರಷ್ಟಾಚಾರದ ಬಗ್ಗೆ ಎಲ್ಲಾ ರಾಜ್ಯಗಳಲ್ಲಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ಜಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics