ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!

ರಾಜಧಾನಿ ಬೆಂಗಳೂರಿನ ಖ್ಯಾತ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 19 Aug 2018, 9:46 am
ಬೆಂಗಳೂರು: ರಾಜಧಾನಿ ಬೆಂಗಳೂರಿನ ಖ್ಯಾತ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ.
ಕಬ್ಬನ್ ಪಾರ್ಕ್ ​​ನಲ್ಲಿ ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವತಿಯ ದೇಹ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಉದ್ಯಾನದ ಸಿಬ್ಬಂದಿ ಇದನ್ನು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 
ಮೃತ ಯುವತಿಯನ್ನು ಸುಮಾರು 18 ವರ್ಷದ ಸಂತೋಷಿ ಎಂದು ಗುರುತಿಸಲಾಗಿದ್ದು, ಮರಕ್ಕೆ ವೇಲಿನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Advertisement

Advertisement

ಸದ್ಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement