ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಯುವಕನ ಪ್ರಾಣ ತೆಗೆದ ವೈದ್ಯ

ಜನರ ಜೀವ ಉಳಿಸಬೇಕಾದ ನಗರದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯನೊಬ್ಬ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ, ರಸ್ತೆ...

ಬೆಂಗಳೂರು: ಜನರ ಜೀವ ಉಳಿಸಬೇಕಾದ ನಗರದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯನೊಬ್ಬ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ, ರಸ್ತೆ ದಾಟುತ್ತಿದ್ದ 17 ವರ್ಷದ ಯುವಕನ ಪ್ರಾಣ ತೆಗೆದ ಘಟನೆ ಭಾನುವಾರ ರಾತ್ರಿ ಇಂದಿರಾನಗರದಲ್ಲಿ ನಡೆದಿದೆ.
ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಯ ವೈದ್ಯ ರವಿತೇಜ ಅವರು ಪಾರ್ಟಿ ಮುಗಿಸಿಕೊಂಡು ತಮ್ಮ ಬಿಎಂಡಬ್ಲ್ಯೂ ಕಾರು ಚಲಾಯಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಇಂದಿರಾನಗರದ ದೋಪನಹಳ್ಳಿ ಫ್ಲೈಓವರ್​ ಬಳಿ ರಸ್ತೆ ದಾಟುತ್ತಿದ್ದ ಕೆವಿನ್​ ಎಂಬಾತನಿಗೆ ಡಿಕ್ಕಿ ಹೊಡೆಸಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಕೆವಿನ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಪ್ರಕರಣ ದಾಖಲಿಸಿಕೊಂಡ ಹಲಸೂರು ಸಂಚಾರಿ​ ಠಾಣೆ ಪೊಲೀಸರು, ವೈದ್ಯ ರವಿತೇಜನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ವೈದ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆಂಧ್ರಪ್ರದೇಶ ಮೂಲದ ವೈದ್ಯ ರವಿತೇಜ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕುಡಿದು ಕಾರು ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ