ಕೊಡಗು: ಕರ್ನಾಟಕ ಮತ್ತು ಕೇರಳದಲ್ಲಿ ಸಂಭವಿಸಿರುವ ಶತಮಾನದ ಭೀಕರ ಪ್ರವಾಹದ ಕುರಿತು ಒಂದು ತಿಂಗಳ ಹಿಂದೆಯೇ ಪ್ರಕೃತಿ ಮುನ್ಸೂಚನೆ ನೀಡಲಾಗಿತ್ತು ಎನ್ನಲಾಗುತ್ತಿದೆ.
ಈ ಬಗ್ಗೆ ಕೊಡಗಿನಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, ಕಳೆದ ಜುಲೈನಲ್ಲಿ ಕೊಡಗು, ಮಡಿಕೇರಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಜುಲೈ 9ರಂದು ಮಧ್ಯಾಹ್ನ 12.53ರಲ್ಲಿ ಭೂಮಿ ಕಂಪಿಸಿತ್ತು. ಅಲ್ಲದೆ ಹಲವೆಡೆ ಭೂ ಕುಸಿತವಾಗಿತ್ತು. ಇದಾದ ಬಳಿಕ ಕೆಲವೇ ದಿನಗಳಲ್ಲಿ ಕೊಡಗಿನಲ್ಲಿ ಸಿಡಿಲು ಗುಡುಗಿನ ಆರ್ಭಟಗಳು ಜೋರಾಗಿದ್ದವು. ಸಿಡಿಲ ಅಬ್ಬರ ಕೇಳಿದ ಹಿರಿಯರು ಇಂತಹದೊಂದು ಗುಡುಗು, ಸಿಡಿಲಿನ ಸದ್ದನ್ನು ತಮ್ಮ ಜೀವನಾವಧಿಯಲ್ಲೇ ಕೇಳಿರಲಿಲ್ಲ ಎಂದಿದ್ದರು. ಬಹುಶಃ ಅವತ್ತು ನಡೆದ ಒಂದೆರಡು ಘಟನೆಗಳು ಜಲಪ್ರಳಯದ ಮುನ್ಸೂಚನೆಯಾಗಿತ್ತಾ? ಎಂಬುದು ಇವತ್ತು ಕೊಡಗಿನ ಜನರನ್ನು ಕಾಡತೊಡಗಿದೆ.
ಈ ಘಟನೆ ನಡೆದ ಸುಮಾರು 1 ತಿಂಗಳ ಅವಧಿಯಲ್ಲಿ ಕೇರಳ ಮತ್ತು ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಪ್ರವಾಹ ಉಂಟಾಗಿದೆ. ದೇವರ ನಾಡು ಎಂದೇ ಖ್ಯಾತಿ ಪಡೆದಿದ್ದ ಕೇರಳ ಭಾಗಶಃ ನೀರಿನಲ್ಲಿ ಮುಳುಗಿದ್ದು, ದಕ್ಷಿಣದ ಕಾಶ್ಮೀರ ಕೊಡಗು ಭಾರಿ ಮತ್ತು ಭೂಕುಸಿತದಿಂದ ತತ್ತರಿಸಿ ಹೋಗಿದೆ.
ಪ್ರಕೃತಿ ಮೇಲಿನ ಮನಷ್ಯನ ಅತ್ಯಾಚಾರಗಳೇ ಇಂದಿನ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics