ಕಾರ್ಯಾಚರಣೆಯಲ್ಲಿ ತೊಡಗಿರುವ ಸಂಸದ ಪ್ರತಾಪ್ ಸಿಂಹ 
ರಾಜ್ಯ

ಕೊಡಗು: ಕಡಿತಗೊಂಡಿದ್ದ ರಸ್ತೆ-ಸೇತುವೆ ಸಂಪರ್ಕ ಸರಿಪಡಿಸಲು ಖುದ್ದು ಕಾರ್ಯಾಚರಣೆಗಿಳಿದ ಸಂಸದ ಪ್ರತಾಪ್ ಸಿಂಹ

ಜಲಾವೃತಗೊಂಡಿರುವ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ಸೇತುವೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯಾಚರಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಖುದ್ದಾಗಿ ಭಾಗವಹಿಸಿದ್ದಾರೆ.

ಸೋಮವಾರ ಪೇಟೆ: ಜಲಾವೃತಗೊಂಡಿರುವ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ಸೇತುವೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯಾಚರಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಖುದ್ದಾಗಿ ಭಾಗವಹಿಸಿದ್ದಾರೆ. 
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು,  ಸೋಮವಾರ ಪೇಟೆ ತಾಲ್ಲೂಕಿನ ಮಾದಾಪುರ , ಹಟ್ಟಿಹೊಳೆ ಮತ್ತು ಮುಕ್ಕೋಡ್ಲು ವಿನಲ್ಲಿ ಭಾರಿ ಮಳೆಯಿಂದಾಗಿ ಸೇತುವೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿತ್ತು.  ಈ ಹಿನ್ನೆಲೆಯಲ್ಲಿ ಸ್ವತಃ ಕಾರ್ಯಾಚರಣೆಗಿಳಿದಿರುವ ಪ್ರತಾಪ್ ಸಿಂಹ ಅವರ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
ಮಳೆಯಿಂದಾಗಿ ಕೊಡಗಿನ ಪರಿಸ್ಥಿತಿ ಹದಗೆಟ್ಟು, ರಕ್ಷಣಾ ಕಾರ್ಯಾಚರಣೆಯ ಪ್ರಾರಂಭವಾದ ದಿನದಿಂದಲೂ ಖುದ್ದಾಗಿ ಸ್ಥಳಕ್ಕೆ ತೆರಳಿ ನಿರಾಶ್ರಿತರ ಅಗತ್ಯತೆಗಳಿಗೆ ಸಂಸದ ಪ್ರತಾಪ್ ಸಿಂಹ  ಸ್ಪಂದಿಸುತ್ತಿದ್ದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕೊಡಗು ಮಳೆಯಿಂದ ತತ್ತರಿಸಿದೆ ಸಂಸದ ಪ್ರತಾಪ್ ಸಿಂಹ ಎಲ್ಲಿ? ಎಂದು ಪ್ರಶ್ನಿಸಿದ್ದರು. ಆ.19 ರಂದು ಫೇಸ್ ಬುಕ್ ಲೈವ್ ನಲ್ಲಿ ಕಾರ್ಯಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದ ಪ್ರತಾಪ್ ಸಿಂಹ, ಸಾಮಾಜಿಕ ಜಾಲತಾಣದಲ್ಲಿ ಸಂಸದರು ಎಲ್ಲಿ ಎಂದು ಪ್ರಶ್ನಿಸಿದವರಿಗೂ ಉತ್ತರ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ