ರಾಜ್ಯ

ಮಳೆಯ ಆರ್ಭಟಕ್ಕೆ ತತ್ತರಿಸಿದ ಕೊಡಗು: ಪ್ರವಾಹ ಸ್ಥಿತಿಗತಿ ವಿಚಾರಿಸಿದ ರಾಷ್ಟ್ರಪತಿ ಕೋವಿಂದ್

Manjula VN
ನವದೆಹಲಿ: ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಿನ್ನೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೂರವಾಣಿ ಕರೆ ಮಾಡಿದ್ದು, ಈ ವೇಳೆ ಕೊಡಗು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 
ಪ್ರವಾಹಕ್ಕೆ ಸಿಲುಕಿರುವ ಕೊಡಗು ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಎನ್'ಡಿಆರ್'ಎಫ್, ಭಾರತೀಯ ಸೇನೆ ಹಾಗೂ ಇತರ ರಕ್ಷಣಾ ದಳಗಳ ಜೊತೆಗೆ ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸುತ್ತಿದೆ. ಇದೂವರೆಗೂ 3500ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರಪತಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. 
SCROLL FOR NEXT