ಪ್ರವಾಹಪೀಡಿತ ಕೊಡಗು ಜಿಲ್ಲೆಗೆ ಕೇಂದ್ರದಿಂದ 100 ಕೋಟಿ ರೂ. ನೆರವು ಕೇಳಿದ ಸಿಎಂ ಕುಮಾರಸ್ವಾಮಿ
ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನರ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕೆ...
ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನರ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕೆ 100 ಕೋಟಿ ರೂಪಾಯಿ ನೆರವು ನೀಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರು ಕೇರಳ ರಾಜ್ಯಕ್ಕೆ 500 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ ನಾವು ಕೊಡಗಿಗೆ ಕನಿಷ್ಠ 100 ಕೋಟಿಯನ್ನಾದರೂ ಬಿಡುಗಡೆ ಮಾಡಬೇಕೆಂದು ಕೇಳುತ್ತೇವೆ. ಕೇಂದ್ರಕ್ಕೆ ಈ ಕುರಿತು ಮನವಿ ಸಲ್ಲಿಸಲಾಗುವುದು, ರಸ್ತೆ ಸಂಪರ್ಕ ಕಲ್ಪಿಸಬೇಕಾಗಿದೆ. ಅದಕ್ಕಾಗಿ ಭಾರತೀಯ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ಸಹಾಯವನ್ನು ಪಡೆಯುತ್ತಿದ್ದೇವೆ ಎಂದರು.
ಪ್ರವಾಹ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದೇವೆ. ಇದುವರೆಗೆ ಇಲ್ಲಿ 12 ಮಂದಿ ಮೃತಪಟ್ಟಿದ್ದು 845 ಮನೆಗಳು ಹಾನಿಗೀಡಾಗಿವೆ, ಅವುಗಳಲ್ಲಿ 773 ಮನೆಗಳು ಭಾಗಶಃ ಹಾನಿಗೊಳಗಾದವವಾಗಿವೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.