ಬೆಂಗಳೂರು: ಮಹಾ ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿ ಕೊಡಗಿನಲ್ಲಿ ನಿರಾಶ್ರಿತರಾಗಿ ಮನೆ ಕಳೆದುಕೊಂಡಿರುವವರಿಗೆ ಪ್ರೀಫ್ಯಾಬ್ರಿಕ್ ಮನೆಗಳನ್ನು ನಿರ್ಮಿಸಿಕೊಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಕೇವಲ ಮೂರೇ ದಿನಗಳಲ್ಲಿ ನಿರ್ಮಿಸಿಕೊಡಬಹುದಾಗಿದೆ.
ಮಳೆ ನಿಂತ ಮೇಲೆ ಮನೆ ಕಳೆದುಕೊಂಡಿರುವವರ ಮಾಹಿತಿ ಪಡೆದು 3 ದಿನದೊಳಗೆ ನಿರ್ಮಾಣ ಮಾಡಿಕೊಡಬಹುದಾದಂತಹ ಪ್ರೀಫ್ಯಾಬ್ರಿಕ್ ಹೌಸ್‍ಗಳನ್ನು ನಿರಾಶ್ರಿತರಿಗೆ ಒದಗಿಸಲಾಗುವುದು ಎಂದು ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.
ಸಿದ್ಧಾರ್ಥ ಸಂಸ್ಥೆ ವತಿಯಿಂದ ಆಹಾರ ಪದಾರ್ಥ, ವಿವಿಧ ಪರಿಹಾರ ಸಾಮಗ್ರಿಗಳನ್ನು ಹೊತ್ತ ನಾಲ್ಕು ಟ್ರಕ್‍ಗಳಿಗೆ ಸದಾಶಿವನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕೊಡಗಿನಲ್ಲಿ ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಮನೆ ಕಳೆದುಕೊಂಡವರಿಗೆ ಈ ತಕ್ಷಣ ಮನೆ ಒದಗಿಸಬೇಕಿದೆ. ಅದಕ್ಕಾಗಿ ಪ್ರೀ-ಫ್ಯಾಬ್ರಿಕೇಷನ್ ಹೌಸ್‍ಗಳನ್ನು ಒದಗಿಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳೊಂದಿಗೂ ಸಹ ಸಮಾಲೋಚನೆ ನಡೆಸಲಾಗಿದೆ. ಮಳೆ ನಿಂತ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಇನ್ನೂ ಕೊಡಗಿಗೆ ಭೇಟಿ ನೀಡಿ ಮಾತನಾಡಿದ ಯು.ಟಿ ಖಾದರ್ ಮೊದಲು ಸರ್ಕಾರ ಸಂತ್ರಸ್ತರ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡಬೇಕಾಗಿದೆ, ನಿರಾಶ್ರಿತರ ಶಿಬಿರದಲ್ಲಿರುವ ಮಕ್ಕಳಿಗೆ ಶಾಲೆಗೆ ತೆರಳುವ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics