ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಎರಡನೇ ವಿಮಾನ ನಿಲ್ದಾಣ

ಪ್ರಯಾಣಿಕರ ಸಂಖ್ಯೆ ಹೆಚ್ಚಳದಲ್ಲಿ 2018ರ ಆದಿಭಾಗದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ...

ಬೆಂಗಳೂರು: ಪ್ರಯಾಣಿಕರ ಸಂಖ್ಯೆ ಹೆಚ್ಚಳದಲ್ಲಿ 2018ರ ಆದಿಭಾಗದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವೆನಿಸಿದೆ.

ಕಳೆದ ಜನವರಿಯಿಂದ ಜೂನ್ ವರೆಗೆ 1,58,50,352 ಪ್ರಯಾಣಿಕರು ಇಲ್ಲಿಂದ ಹಾರಾಟ ನಡೆಸಿದ್ದಾರೆ. ಕಳೆದ ವರ್ಷಕ್ಕಿಂತ 41,80,852 ಪ್ರಯಾಣಿಕರು ಹೆಚ್ಚಾಗಿದ್ದಾರೆ.

ಮೊದಲ ಸ್ಥಾನದಲ್ಲಿ ಟೋಕ್ಯೋದ ಹನೆಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಜಾಗತಿಕ ಮಟ್ಟದಲ್ಲಿ ವಿಮಾನ ನಿಲ್ದಾಣಗಳ ಗುಣಮಟ್ಟವನ್ನು ಗುರುತಿಸುವ ರೂಟ್ಸ್ ಆನ್ ಲೈನ್ ಕಂಪೆನಿ ತನ್ನ ವರದಿಯನ್ನು ನಿನ್ನೆ ಪ್ರಕಟಿಸಿದೆ. ಕಳೆದ ಆರು ತಿಂಗಳಲ್ಲಿ ವಿಮಾನ ನಿಲ್ದಾಣದಲ್ಲಿ 2.5 ದಶಲಕ್ಷಕ್ಕಿಂತ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸಿದ ವಿಮಾನ ನಿಲ್ದಾಣವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.

ಜನವರಿಯಿಂದ ಜೂನ್ ವರೆಗೆ ಹನೆಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 4,32,88,588 ಪ್ರಯಾಣಿಕರು ಹಾರಾಟ ನಡೆಸಿದ್ದಾರೆ. ಜಕಾರ್ತದ ಸಿಜಿಕೆ ವಿಮಾನ ನಿಲ್ದಾಣದಿಂದ 39,01,806 ಪ್ರಯಾಣಿಕರು ಸಂಚರಿಸಿದ್ದಾರೆ.

ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 6ನೇ ಸ್ಥಾನದಲ್ಲಿ, ಹೈದರಾಬಾದ್ ಪ್ರಯಾಣಿಕರ ಹಾರಾಟ ಸಂಖ್ಯೆಯಲ್ಲಿ 17ನೇ ಸ್ಥಾನದಲ್ಲಿದೆ. ಆದರೆ ಪ್ರಯಾಣಿಕರ ಹಾರಾಟ ಸಂಖ್ಯೆ ಹೆಚ್ಚಳದಲ್ಲಿ ಮಾತ್ರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 8ನೇ ಸ್ಥಾನದಲ್ಲಿದೆ. ಚೀನಾದ ಕ್ವಾನ್ಝೋ ಜಿನ್ಜಿಯಾಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!