ವೈ ಎಸ್ ವಿ ದತ್ತಾ ಅವರ ಪತ್ನಿ ನಿರ್ಮಲಾ ದತ್ತ ಅವರ ಅಂತಿಮ ದರ್ಶನ ಪಡೆದ ಹೆಚ್ ಡಿ ದೇವೇಗೌಡ ದಂಪತಿ 
ರಾಜ್ಯ

ಮಾಜಿ ಶಾಸಕ ವೈ ಎಸ್ ವಿ ದತ್ತಾ ಪತ್ನಿ ನಿರ್ಮಲಾ ದತ್ತ ನಿಧನ

ಜೆಡಿಎಸ್ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ನಿನ್ನೆ ...

ಬೆಂಗಳೂರು: ಜೆಡಿಎಸ್ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ನಿನ್ನೆ ನಿಧನರಾಗಿದ್ದು, ಇಂದು ರಾಜಾಜಿನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಇಂದು ಸಂಜೆ ಅವರ ಊರು ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ನಿರ್ಮಲಾ ಅವರು ಪತಿ ಮಾಜಿ ಶಾಸಕ ವೈ ಎಸ್ ವಿ ದತ್ತ ಹಾಗೂ ಪುತ್ರಿ ಶ್ರೀದೇವಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು ದತ್ತ ಅವರ ಚುನಾವಣೆ ಸಂದರ್ಭ ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ಬಾರಿಯೂ ತಮ್ಮ ಅನಾರೋಗ್ಯದ ನಡುವೆಯೂ ದತ್ತ ಅವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತದಾನ ಕೂಡ ಚಲಾಯಿಸಿದ್ದರು.

ನಿರ್ಮಲಾ‌ ನಿಧನ ಸುದ್ದಿ ಗೊತ್ತಾಗುತ್ತಿದ್ದಂತೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್‌.ಡಿ.ದೇವೇಗೌಡ ಮತ್ತು ಅವರ ಪತ್ನಿ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ತೆರೆಳಿ ಅಂತಿಮ ದರ್ಶನ ಪಡೆದರು. ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT