ಬ್ರಿಟನ್ ಗೆ ತೆರಳಲು ಅನುಮತಿ ಕೊಡಿ: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಮನವಿ 
ರಾಜ್ಯ

ಬ್ರಿಟನ್ ಗೆ ತೆರಳಲು ಅನುಮತಿ ಕೊಡಿ: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಮನವಿ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಾಸಕ ಎನ್.ಎ. ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್ ಇದೀಗ ವಿದೇಶಕ್ಕೆ ತೆರಳಲು ಅನುವಾಗಿದ್ದಾರೆ.

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಾಸಕ ಎನ್.ಎ. ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್ ಇದೀಗ ವಿದೇಶಕ್ಕೆ ತೆರಳಲು ಅನುವಾಗಿದ್ದಾರೆ. ಇದಕ್ಕಾಗಿ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ತಾನು ಬ್ರಿಟನ್ ಗೆ ತೆರಳಬೇಕಿದೆ, ಇದಕ್ಕಾಗಿ ತನ್ನ ಜಾಮೀನು ಅರ್ಜಿ ನಿಡುವಾಗಿನ ಷರತ್ತುಗಳನ್ನು ಸಡಿಲಿಸಿ ಎಂದು ನಲಪಾಡ್ ಹೈಕೋರ್ಟ್ ಗೆ ಮನವಿ ಮಾಡೀದಾರೆ.
ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ವ ಅವರನ್ನೊಳಗೊಂಡ ಏಕಸದಸ್ಯ ಪೀಠ ನಲಪಾಡ್ ಅವರ ಅರ್ಜಿ ವಿಚಾರಣೆ ನಡೆಸಿದೆ.
"ನನ್ನ ತಮ್ಮ ಲಂಡನ್ ನಲ್ಲಿದ್ದಾನೆ, ಅವನನ್ನ ಕಾಣಲು ಣಾನು ಬ್ರಿಟನ್ ಗೆ ತೆರಳಬೇಕಿದೆ. ಇದಕ್ಕಾಗಿ ನ್ಯಾಯಾಲಯ ನನಗೆ ಅನುಮತಿ ನೀಡಬೇಕು" ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು ಸಮಯಾವಕಾಶ ಕೇಳಿದ ಕಾರಣ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆ.27ಕ್ಕೆ ಮುಂದೂಡಿ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮಹಿಳೆ ಫೋಟೋ ಮಾರ್ಫ್ ಮಾಡಿ ಪ್ರಧಾನಿ ಮೋದಿ ಫೋಟೋದೊಂದಿಗೆ ಪ್ರದರ್ಶನ: CJP ವಿರುದ್ಧ FIR ದಾಖಲು

'ರಾಸಲೀಲೆ ದೃಶ್ಯ' ಲೀಕ್ ಆದಾಗ ನಾಲ್ಕು ದಿನ ಮನೆಯಿಂದ ಹೊರ ಬಂದಿರಲಿಲ್ಲ; ಕಾರು ಚಾಲಕ, ವಾಚ್'ಮನ್ ಸಹ ಆ ವಿಡಿಯೋ ನೋಡಿದ್ದ: ನಟಿ ರಾಧಿಕಾ

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ