ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು 
ರಾಜ್ಯ

ವಾಜಪೇಯಿ ಚಿತಾಭಸ್ಮವನ್ನು ಕಾವೇರಿ ನದಿಗೆ ವಿಸರ್ಜಿಸಿದ ಯಡಿಯೂರಪ್ಪ

ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಕಾವೇರಿ ನದಿಯ ಪಶ್ಚಿಮವಾಹಿನಿಯಲ್ಲಿ ವಿಸರ್ಜಿಸಲಾಗಿದೆ.

ಮಂಡ್ಯ: ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅನಂತಕುಮಾರ್​, ಆರ್. ಅಶೋಕ್ ಇನ್ನೂ ಮೊದಲಾದವರು ಗುರುವಾರ ಶ್ರೀರಂಗಪಟ್ಟಣದಲ್ಲಿನ ಕಾವೇರಿ ತೀರದಲ್ಲಿ ನೆರೆದಿದ್ದು ಸಕಲ ಪೂಜಾ ಕೈಂಕರ್ಯ ನೆರವೇರಿಸಿದ್ದಾರೆ.
ಶ್ರೀರಂಗಪಟ್ಟಣ ಜ್ಯೋತಿಷಿ ಭಾನುಪ್ರಕಾಶ್​ ಶರ್ಮಾ ಮುಂದಾಳತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು.
ಇದಕ್ಕೆ ಮುನ್ನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿತಾಭಸ್ಮವಿದ್ದ ಕಳಶದ ಮೆರವಣಿಗೆ ನಡೆದಿದೆ. ಮಾರ್ಗದ ನಡುವೆ ನಿಡಘಟ್ಟ, ಮದ್ದೂರು, ಮಂಡ್ಯ ನಗರಗಳಲ್ಲಿ ವಾಜಪೇಯಿ ಅವರ ಚಿತಾಭಸ್ಮದ ಕಳಶಕ್ಕೆ ಪುಷ್ಪಾರ್ಚನೆ ಸಹ ನೆರವೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!