ಮಡಿಕೇರಿ: ಕೊಡಗಿನ ರಸ್ತೆಗಳು, ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕಗಳನ್ನು ಪುನಃಸ್ಥಾಪಿಸುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತೀಯ ಸೇನೆ ನೀಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ.
ಮಹಾಮಳೆ, ಭೂ ಕುಸಿತ, ಪ್ರವಾಹದಿಂದ ಕಂಗೆಟ್ಟಿದ್ದ ಕೊಡಗು ಜಿಲ್ಲೆಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ. ಅಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಭೇಟ್ ನೀಡಿ ಸಂತ್ರಸ್ತರ ಅಳಲನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಅವರು ಕೊಡಗನ್ನು ಪುನರ್ ಸ್ಥಾಪಿಸಲು ಸೇನೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು. ಏರ್ ಫೋರ್ಸ್ ಕೂಡ ತನ್ನ ಸಹಾಯ ಮಾಡಲಿದೆ' ಎಂದು ಸಚಿವೆ ಹೇಳಿಕೆ ನೀಡಿದ್ದಾರೆ.