ಮಡಿಕೇರಿ: ಮಹಾಮಳೆ ಹಾಗೂ ಭೂ ಕುಸಿತದಿಂದ ತೀವ್ರ ಹಾನಿಗೀಡಾದ ಕೊಡಗು ಜಿಲ್ಲೆಯ ಮಾದಾಪುರ ಮೊದಲಾದ ಕಡೆಗಳಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತೆರಳಿ ಪರಿಸ್ಥಿತಿ ಪರಿಶೀಲನೆ ನಡೆಸಿದರು.
ಬಳಿಕ ಮಡಿಕೇರಿ ನಗರದ ಬ್ರಾಹ್ಮಣರ ಕಲ್ಯಾಣ ಮಂಟಪ ಮತ್ತು ಮೈತ್ರಿಹಾಲ್ ನಲ್ಲಿನ ಪರಿಹಾರ ಕೇಂದ್ರಗಳಿಗೆ ತೆರಳಿ ಸಂತ್ರಸ್ತರ ಸಮಸ್ಯೆ ಆಲಿಸಿದರು.
ಸೇನಾ ಮತ್ತು ವಾಯುಪಡೆಗಳ ನೆರವಿನಿಂದ ರಸ್ತೆ. ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಪುನರ್ ಸ್ಥಾಪಿಸಲು ಇಲ್ಲಿಗೆ ಬಂದಿರುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.