ಮಡಿಕೇರಿ: ಮಹಾಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಕೊಡಗಿನ ಪರಿಸ್ಥಿತಿಯನ್ನು ಅವಲೋಕಿಸಿದರು.
ಇನ್ನು ನಿರಾಶ್ರಿತಗೊಂಡಿರುವ ಕೊಡಗು ಜನತೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಇನ್ನು ಇಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಸಂತ್ರಸ್ತರ ಅಳಲನ್ನು ಆಲಿಸಿದರು.
ಇದೇ ವೇಳೆ ನನಗೂ ಕನ್ನಡ ಬರುತ್ತದೆ ನೀವು ನಿಮ್ಮ ಸಂಕಷ್ಟವನ್ನು ಕನ್ನಡದಲ್ಲೇ ಹೇಳಿ ಎಂದು ನಿರ್ಮಲಾ ಸೀತಾರಾಮನ್ ಅವರು ಸಮಸ್ಯೆಯನ್ನು ಆಲಿಸಿ, ಕನ್ನಡದಲ್ಲೇ ಅವರಿಗೆ ಸಾಂತ್ವನವನ್ನು ಹೇಳಿದರು.
ನಂತರ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು ಕೊಡಗಿನ ರಸ್ತೆಗಳು, ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕಗಳನ್ನು ಪುನಃಸ್ಥಾಪಿಸುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತೀಯ ಸೇನೆ ನೀಡಲಿದೆ ಎಂದರು.