ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿಗರ ಮೇಲೆ ಮತ್ತೊಂದು ಸೆಸ್ ಹೇರಲು ಬಿಬಿಎಂಪಿ ಸಿದ್ಧತೆ

ತೀವ್ರ ವಿರೋಧದ ನಡುವೆಯೂ ಸಾರಿಗೆ ಉಪಕರ ಹೇರಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಬೆಂಗಳೂರಿಗರ ಮೇಲೆ ಮತ್ತೊಂದು ಸೆಸ್ ಹೇರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ...

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ಸಾರಿಗೆ ಉಪಕರ ಹೇರಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಬೆಂಗಳೂರಿಗರ ಮೇಲೆ ಮತ್ತೊಂದು ಸೆಸ್ ಹೇರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಸ್ವತ್ತುಗಳ ಆಸ್ತಿ ತೆರಿಗೆ ಮೇಲೆ ಶೇ.2ರಷ್ಟು ಸಾರಿಗೆ ಸೆಸ್ ಹೇರಿ, ರೂ.30 ಕೋಟಿ ಸಾರಿಗೆ ಸೆಸ್ ಸಂಗ್ರಹಿಸಲು ಬಿಬಿಎಂಪಿ ಯೋಜನೆ ರೂಪಿಸುತ್ತಿದೆ. ಈ ಸಂಬಂಧ ಭೂ ಸಾರಿಗೆ ಕರ ಸಂಗ್ರಹಿಸಲು ಲೆಕ್ಕ ಪರಿಶೋಧಕರಿಂದಲೇ ಸರ್ಕಾರಕ್ಕೆ ಮಾಹಿತಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. 
ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರೇ ದೃಢಪಡಿಸಿದ್ದು, ಸಾರಿಗೆ ಸೆಸ್ ಜಾರಿ ಕುರಿತು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಕುರಿತ ನಿರ್ಧಾರ ಜಾರಿಯಾಗುತ್ತಿದ್ದಂತೆಯೇ 2018-19ನೇ ಸಾಲಿನ ಆರ್ಥಿಕ ವರ್ಷದಿಂದಲೇ ಹಣವ್ನು ಸಂಗ್ರಹಿಸಲಾಗುತ್ತದೆ. ಈಗಾಗಲೇ ಆಸ್ತಿ ತೆರಿಗೆ ಪಾವತಿ ಮಾಡಿದವರೂ ಕೂಡ ಸೆಸ್ ಪಾವತಿ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. 
ಬೆಂಗಳೂರಿನ ರಸ್ತೆಗಳ ಪರಿಸ್ಥಿತಿಯಿಂದ ಬಿಎಂಟಿಸಿ ಬಸ್ ಗಳು ಹಾಳಾಗುತ್ತಿದ್ದು, ನಗರ ಭೂ ಸಾರಿಗೆ ವ್ಯವಸ್ಥೆ ಉತ್ತಮ ಪಡಿಸಲು ಬಿಬಿಎಂಪಿ ಹಣ ನೀಡಬೇಕೆಂದು ಕೆಲವು ದಿನಗಳ ಹಿಂದೆ ಸಾರಿಗೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದನ್ನು ಪುರಸ್ಕರಿಸಿರುವ ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಆಸ್ತಿ ತೆರಿಗೆ ಮೊತ್ತದ ಶೇ.2ರಷ್ಟು ಹಣವನ್ನು ನಗರ ಭೂ ಸಾರಿಗೆ ಉಪಕರ ಎಂದು ವಸೂಲಿ ಮಾಡಲು ಅನುಮತಿ ನೀಡಿದೆ. 
ಆಸ್ತಿ ಮಾಲೀಕರಿಗೆ ಹೊರೆಯಾಗುವ ದೃಷ್ಟಿಯಿಂದ ಆದೇಶ ಹಿಂಪಡೆಯುವಂತೆ 2014ರಲ್ಲಿಯೇ ಕೌನ್ಸಿಲ್ ನಲ್ಲಿ ನಿರ್ಣಯಕೈಗೊಂಡು ಸರ್ಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ಬಿಬಿಎಂಪಿ ಈ ನಿರ್ಣವಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ರಾಜ್ಯ ಸರ್ಕಾರ ಉಪಕರ ವಸೂಲಿಗೆ ಚಿಂತನೆ ನಡೆಸಿದೆ. 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ತಮ್ಮಣ್ಣ ಅವರು, ಸಾರಿಗೆ ತೆರಿಗೆ ಸಂಗ್ರಹಿಂದ ಬಿಎಂಟಿಸಿಗೆ ಆಗುತ್ತಿರುವ ನಷ್ಟವನ್ನು ಭರಿಸಬಹುದು ಎಂದು ಬಿಬಿಎಂಪಿಗೆ ತಿಳಿಸಲಾಗಿತ್ತು. ಸಂಚಾರ ದಟ್ಟಣೆ ಹಾಗೂ ರಸ್ತೆಗಳ ಕೆಟ್ಟ ಪರಿಸ್ಥಿತಿಯಿಂದಾಗಿ ಬಿಎಂಟಿಸಿಗೆ ರೂ.30 ಕೋಟಿ ನಷ್ಟವಾಗುತ್ತಿದೆ. ನಷ್ಟ ಭರಿಸಲು ತೆರಿಗೆ ಜಾರಿಗೆ ತರುವ ದಾರಿಯಷ್ಟೇ ಉಳಿದಿದೆ ಎಂದು ಹೇಳಿದ್ದಾರೆ. 
ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಮಾತನಾಡಿ, ಸಾರಿಗೆ ತೆರಿಗೆ ಜಾರಿ ಕುರಿತಂತೆ ಎದುರಾಗುವ ಸಾಧಕ ಹಾಗೂ ಬಾಧಕಗಳ ಕುರಿತು ಬಿಬಿಎಂಪಿಯನ್ನು ಕೇಳಲಾಗಿದೆ. ಬಿಬಿಎಂಪಿಗೆ ಮುಕ್ತ ಹಸ್ತವನ್ನು ನೀಡಲಾಗಿದ್ದು, ಬಿಬಿಎಂಪಿ ಯಾವುದೇ ನಿರ್ಧಾರ ಕೈಗೊಂಡರೂ ಅದರಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT