ಬಿಎಸ್ ಯಡಿಯೂರಪ್ಪ 
ರಾಜ್ಯ

ಬಿಎಸ್ ವೈಗೆ ಬಿಗ್​ ರಿಲೀಫ್​: ಅಕ್ರಮ ಡಿನೋಟಿಫಿಕೇಷನ್​ ಪ್ರಕರಣದಿಂದ ಖುಲಾಸೆ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನಂತರ ಈಗ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ...

ಬೆಂಗಳೂರು: ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನಂತರ ಈಗ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರಿಗೂ ಕೋರ್ಟ್​ ಬಿಗ್​ ರಿಲೀಫ್​ ನೀಡಿದ್ದು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಿಂದ ಮಂಗಳವಾರ ಖುಲಾಸೆಗೊಂಡಿದ್ದಾರೆ.
ಯಡಿಯೂರಪ್ಪ ಅವರ ವಿರುದ್ಧ ಸಿರಾಜಿನ್ ಬಾಷಾ ಹಾಗೂ ಬಾಲಕೃಷ್ಣ ಎಂಬುವವರು ದಾಖಲಿಸಿದ್ದ ಅಕ್ರಮ ಡಿನೋಟಿಫಿಕೇಷನ್​ ಪ್ರಕರಣವನ್ನು ಸೆಷನ್ಸ್​ ಕೋರ್ಟ್ ಇಂದು ವಜಾಗೊಳಿಸಿದೆ.
ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ​ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಆರೋಪಿಯಾಗಿದ್ದರು. ಈ ಎಲ್ಲಾ ಪ್ರಕರಣಗಳಿಂದಲೂ ಯಡಿಯೂರಪ್ಪ ಮುಕ್ತಿ ಪಡೆದಿದ್ದಾರೆ. 
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್​ ಅವರು ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ ಆದೇಶ ಹೊರಡಿಸಿದ್ದಾರೆ.
ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪ್ರಕರಣವನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಮೂವರನ್ನು ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಖುಲಾಸೆಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!